ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಜನರ ಸಮೃದ್ಧಿಯೇ ನಿತ್ಯ ನವರಾತ್ರಿ

ಶ್ರೀ ಕ್ಷೇತ್ರ ಸಿಗಂದೂರು ದಸರಾ ವೈಭವಕ್ಕೆ ಚಾಲನೆ ನೀಡಿದ ಸಚಿವ ಮಧು ಬಂಗಾರಪ್ಪ ಆಶಯ

ಶಿವಮೊಗ್ಗ: ಕಲಿಯುವ ಮಕ್ಕಳಿಗೆ ಉತ್ತಮ ವಿದ್ಯೆ, ಯೋಗ್ಯ ಸಂಸ್ಕಾರ, ರೈತರು ಉಳುವ ಭೂಮಿಗೆ ಹಕ್ಕುಪತ್ರ, ನೀರಾವರಿ ಮತ್ತು ಉತ್ತಮ ಬೆಳೆ ಬಂದರೆ ನಿತ್ಯವೂ ನವರಾತ್ರಿಯ ಸಂಭ್ರಮ ಮನೆಮಾಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಸಾಗರ ತಾಲೂಕು ಶ್ರೀ ಕ್ಷೇತ್ರ ಸಿಗಂದೂರು ಚೌಡಮ್ಮ ದೇಗುಲದಲ್ಲಿ ಗುರುವಾರ ದಸರಾ ವೈಭವ ಕಾರ್ಯಕ್ರಮಕ್ಕೆ ಚೆಂಡೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರಿಂದ ನವರಾತ್ರಿಯ ಸಂಭ್ರಮ ಇಮ್ಮಡಿಯಾಗಿದೆ. ರಾಜ್ಯ ಸರ್ಕಾರ ಸಂವಿಧಾನ ಓದು ಕಾರ್ಯಕ್ರಮವನ್ನು ಜಾರಿಗೆ ತಂದಿರುವುದರಿಂದ ಮಕ್ಕಳಲ್ಲಿ ಸಂವಿಧಾನದ ಅರಿವು, ಜಾತ್ಯತೀತ ಮನೋಭಾವ ಹೆಚ್ಚಾಗುತ್ತದೆ. ಮಕ್ಕಳನ್ನು ಜಾತಿ-ಧರ್ಮದ ತಾರತಮ್ಯದಿಂದ ದೂರ ಮಾಡುತ್ತದೆ ಎಂದರು.
ಮಕ್ಕಳಲ್ಲಿ ಜಾತಿ ಪ್ರೇಮ ಮೂಡಬಾರದು. ಇದು ಎಂದಿಗೂ ದೇಶ ಪ್ರೇಮವಾಗುವುದಿಲ್ಲ. ಜಾತಿ- ಧರ್ಮದ ಸಂಕೋಲೆ ತೊರೆದು ಒಳ್ಳೆಯ ಪ್ರಜೆಯಾಗಬೇಕು ಎಂದರೆ, ಡಾ.ಬಿ.ಆರ್. ಅಂಬೇಡ್ಕರ್‌ ಅವರು ಕೊಟ್ಟ ಸಂವಿಧಾನದಿಂದ ಮಾತ್ರ ಸಾಧ್ಯ. ಒಂದೇ ಜಾತಿ, ಒಂದೇ ಮತ ಎಂದು ನಾರಾಯಣ ಗುರುಗಳ ಆಶಯವನ್ನು ವೇದಿಕೆ ಮೇಲೆ ಭಾಷಣ ಮಾಡಲಾಗುತ್ತದೆ. ಆದರೆ, ರಾಜಕಾರಣಕ್ಕೆ ಹೋಗಿ ಜಾತಿ, ಧರ್ಮದ ಹೆಸರಿನಲ್ಲಿ ಕಚ್ಚಾಡಿದರೆ, ದೇಶದ ಭವಿಷ್ಯ ಕಟ್ಟಲು ಸಾಧ್ಯವಿಲ್ಲ ಎಂದರು.
ನಾಡಿನ ಅಸಂಖ್ಯಾತ ಭಕ್ತರ ಶ್ರದ್ಧಾ ಕೇಂದ್ರ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಮಷ್ಟಿಯ ದೃಷ್ಟಿಕೋನವನ್ನು ಹೊಂದಿದೆ. ಧರ್ಮದರ್ಶಿ ರಾಮಪ್ಪ ಅವರು ಅನೇಕ ಸಾಮಾಜಿಕ ಕಾರ್ಯಗಳಿಗೆ ಜೀವ ತುಂಬಿದ್ದಾರೆ. ಅದೇ ರೀತಿ, ಶಿಕ್ಷಣ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದಾರೆ. ಆದ್ದರಿಂದ, ಮುಂದಿನ ದಿನದಲ್ಲೂ ಈ ಸಹಕಾರ ಶಿಕ್ಷಣ ಕ್ಷೇತ್ರಕ್ಕೆ ಇರಲಿ ಎಂದು ಕೋರಿದರು. ಶಿಕ್ಷಣ ಇಲಾಖೆಯಲ್ಲಿ ಅನೇಕ ಬದಲಾವಣೆ ತರಲಾಗುತ್ತಿದೆ. ಶರಾವತಿ ಸಂತ್ರಸ್ತರ ಕಣ್ಣೀರು ಒರೆಸುವ ಹೊಣೆ ಸರ್ಕಾರ ಮೇಲಿದೆ. ಇದಕ್ಕೆ ಕ್ರಮವಹಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರ ಹಸಿವು ನೀಗಿಸಲಾಗುತ್ತಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಇಲಾಖೆ ಕಟಿಬದ್ಧವಾಗಿದೆ ಎಂದರು.

ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಮಾತನಾಡಿ, ಚೌಡೇಶ್ವರಿ ದೇವಿಯ ಅನುಗ್ರಹದಿಂದ ಉತ್ತಮ ಮಳೆ- ಬೆಳೆ ಆಗಿದೆ. ಇಲ್ಲಿ ದಸರಾ ಹಬ್ಬವನ್ನು 34 ವರ್ಷದಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕ್ಷೇತ್ರದಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿಕೊಂಡು ಬರಲಾಗುತ್ತಿದೆ. ಇಲ್ಲಿ ದಶಕಗಳಿಂದ ಬಗೆಹರಿಯದ ಹತ್ತಾರು ಸಮಸ್ಯೆಗಳು ಜೀವಂತವಾಗಿವೆ. ಈ ಎಲ್ಲಾ ಸಮಸ್ಯೆಗಳಿಗೆ ಸರ್ಕಾರ ಮುಕ್ತಿ ಕೊಡಿಸಬೇಕು. ಮುಳುಗಡೆ ರೈತರು ಹಾಗೂ ಬಗರ್‌ ಹುಕುಂ ಸಾಗುವಳಿ ಸಮಸ್ಯೆಗೆ ಪರಿಹಾರ ಒದಗಿಸಬೇಕು. 75 ವರ್ಷಗಳ ದಾಖಲೆ ಕೇಳಿದರೆ ಮುಳುಗಡೆ ಸಂತ್ರಸ್ತರಿಗೆ ಕೊಡಲಾಗುವುದಿಲ್ಲ ಈ ಬಗ್ಗೆ ಸರಕಾರ ಗಮನ ಹರಿಸಬೇಕೆಂದು ಹೇಳಿದರು.

ಸಿಗಂದೂರು ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಮಾತನಾಡಿ, ತಾಲ್ಲೂಕಿನ ಸರ್ಕಾರಿ ಶಾಲೆಗಳ ಸೌಂದರ್ಯೀಕರಣಕ್ಕೆ ಸಿಗಂದೂರು ಚಿತ್ತ ಸರ್ಕಾರಿ ಶಾಲೆಗಳತ್ತ ಯೋಜನೆ ಮೂಲಕ ತಾಲ್ಲೂಕಿನ 49ಕ್ಕೂ ಹೆಚ್ಚು ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕರೂರು ಹೂಬಳಿ ತುಮರಿ ಗ್ರಾಂಥಾಲಯಕ್ಕೆ 1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಸ್ಪರ್ಧಾತ್ಮಕ ಪರೀಕ್ಷಾ ಸಲಕರಣೆ ವಿತರಣೆ ಸೇರಿ ಅನೇಕ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡಲಾಗುತ್ತಿದೆ ಎಂದರು.

ಪ್ರಮುಖರಾದ ಆರ್.ಪ್ರಸನ್ನ ಕುಮಾರ, ಕಲಗೋಡು ರತ್ನಾಕರ, ಶ್ರೀನಿವಾಸ ಕರಿಯಣ್ಣ, ಶಾಂತವೀರ ನಾಯ್ಕ, ಹೊಳಿಯಪ್ಪ, ಸರಸ್ವತಿ ಗಣಪತಿ, ಮಂಜಪ್ಪ ಮರಸ, ಯೋಗರಾಜ್‌ ಯಮಗಳಲತೆ ಮತ್ತಿತರರಿದ್ದರು.
ನವರಾತ್ರಿ ಉತ್ಸವದ 9 ದಿನಗಳು ದೇವಿಗೆ ವಿವಿಧ ಪುಷ್ಪಗಳಿಂದ ಅಲಂಕಾರ ನಡೆಯಲಿದ್ದು,ದೇವಿಗೆ ವಿಶೇಷವಾಗಿ ತೈಲಾಭಿಷೇಕ, ಅಲಂಕಾರ ಪೂಜೆ, ಮಹಾ ಪೂಜೆ, ಗಣಹೋಮ ನಡೆಯಲಿದೆ. ಆಲಯದಲ್ಲಿ ಪ್ರತಿನಿತ್ಯ ವಿವಿಧ ಹವನ, ಗುರುಗಳ ಆರಾಧನೆಯು ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ನಡೆಯಲಿವೆ. ಪ್ರತಿನಿತ್ಯ ಸಂಜೆ 7ರಿಂದ ದೀಪೋತ್ಸವ, ರಾತ್ರಿ 8ಕ್ಕೆ ಮಹಾ ಮಂಗಳಾರತಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.

“ನನ್ನ ಅವಧಿಯಲ್ಲಿ ಕಂದಾಯ ಭೂಮಿಯಲ್ಲಿ ಸಾಗುವಳಿ ಮಾಡಿದವರಿಗೆ ಹಕ್ಕುಪತ್ರ ಕೊಡಲಾಗಿತ್ತು. ಅರಣ್ಯ ಭೂಮಿಯ ಸಾಗುವಳಿದಾರರಿಗೆ ತೊಂದರೆಯಾಗಿದೆ. ಎರಡೂ ಇಲಾಖೆಗಳು ಹಿಂದಿನಿಂದ ಮಾಡಿದ್ದ ತಪ್ಪು ಅಮಾಯಕ ರೈತರಿಗೆ ಮರಣಶಾಸನವಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈ ಬಗ್ಗೆ ಹೆಚ್ಚು ಆದ್ಯತೆ ನೀಡಬೇಕು. ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡದಿದ್ದಲ್ಲಿ ದೇವರು ಮೆಚ್ಚುವುದಿಲ್ಲ”
-ಕಾಗೋಡು ತಿಮ್ಮಪ್ಪ, ಮಾಜಿ ಸಚಿವರು.

ಜಾತಿ-ಧರ್ಮದಿಂದ ರಾಜಕಾರಣ ಕಲುಷಿತ: ಮಧು ಬಂಗಾರಪ್ಪ

ದೇಶದಲ್ಲಿ ಅತಿರೇಕದ ಜಾತಿ- ಧರ್ಮದ ಪಾಲನೆಯಿಂದ, ಪ್ರಸ್ತುತ ರಾಜಕಾರಣ ಕಲುಷಿತಗೊಂಡಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪಾಜಿ ಅವರು ಮಾಡಿದ ರಾಜಕಾರಣ ಈಗ ತನ್ನ ಅಸ್ತಿತ್ವ ಹಾಗೂ ಅಸ್ಮಿತೆ ಕಳೆದುಕೊಂಡಿದೆ. ಆದ್ದರಿಂದ ಮಕ್ಕಳ ಮನಸ್ಸಲ್ಲಿ ದೇಶ ಪ್ರೇಮ ಬಿತ್ತಬೇಕು. ಎಳೆ ವಯಸ್ಸಿನಲ್ಲಿಯೇ ಜಾತಿ-ಧರ್ಮದ ಪಾಶದಿಂದ ದೂರ ಇರಿಸಬೇಕು. ಇದಕ್ಕೆ ಸರ್ಕಾರದ ಹಂತದಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದರು.

ಹಿನ್ನೀರು ಪ್ರದೇಶ; ಶಿಕ್ಷಕರ ನೇಮಕಕ್ಕೆ ಆದ್ಯತೆ ನೀಡಿ: ಜಿ.ಟಿ.ಎಸ್‌.

ಕರೂರು ಹೂಬಳಿಯ ಸರ್ಕಾರಿ ಶಾಲೆಗಳ ವ್ಯಾಪ್ತಿ 160 ಶಿಕ್ಷಕರ ಹುದ್ದೆಯಲ್ಲಿ 60 ಜನ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿ ಅತಿಥಿ ಶಿಕ್ಷಕರನ್ನೂ ನೇಮಿಸಲಾಗಿದೆ. ಆದರೆ, ರಾಜ್ಯದಲ್ಲಿ ಮುಂದಿನ ಶಿಕ್ಷಕರ ನೇಮಕಾತಿಯಲ್ಲಿ ಈ ಭಾಗದ ಹಿನ್ನೀರಿನ ಪ್ರದೇಶವನ್ನು ಶಿಕ್ಷಕರು ಆಯ್ಕೆ ಮಾಡಿಕೊಳ್ಳುವುದು ಕನಸಿನ ಮಾತು. ಇಲ್ಲಿ ದೊರೆಯುವ ಮೂಲಸೌಕರ್ಯಗಳ ಕೊರತೆ ಹಾಗೂ ಪರಿಸ್ಥಿತಿ ಇದಕ್ಕೆ ಕಾರಣ. ಆದ್ದರಿಂದ, 2008 ರಲ್ಲಿ ಶಿಕ್ಷಕರ ನೇಮಕಾತಿ ವೇಳೆ ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಶರಾವತಿ ಭಾಗಕ್ಕೆ ಮೊದಲ ಆದ್ಯತೆ ನೀಡಲಾಗಿತ್ತು. ಆನಂತರ ರಾಜ್ಯದಲ್ಲಿ ಉಳಿದ ಸ್ಥಾನ ತುಂಬಲಾಗಿತ್ತು. ಇದೇ ಪ್ರಕ್ರಿಯೆ ಮುಂದಿನ ದಿನದಲ್ಲಿ ನಡೆಯಬೇಕು. ಅದೇ ರೀತಿ, ಇಲ್ಲಿನ ಅನೇಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಕೆಡಿಪಿ ಸದಸ್ಯ ಜಿ.ಟಿ.ಸತ್ಯನಾರಾಯಣ ಸಚಿವರಿಗೆ ಮನವಿ ಮಾಡಿದರು‌.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ