ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಎರಡು ಹೆಣ್ಣು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹೊರ ಭಾಗದಲ್ಲಿರೋ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾಳೆ. ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹಾರಿದ್ದಾಳೆ.ರೇಣುಕಾ ಅಮೀನಪ್ಪ ಕೋನಿನ್ (26), ಯಲ್ಲವ್ವ (2) ಅಮೃತಾ (1) ಮೃತರಾದ ದುರ್ದೈಗಳು, ಕಳೆದ ಎರಡು ದಿನಗಳ ಹಿಂದೆ ಗಂಡನ ಮನೆಯಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ರೇಣುಕಾ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದಳು. ಎರಡು ದಿನಗಳಿಂದ ಗಂಡನ ಮನೆಯವರು ರೇಣುಕಾ ಹಾಗೂ ಮಕ್ಕಳಿಗಾಗಿ ಹುಡುಕಾಡಿದ್ದರು. ಕೊನೆಗೆ ಕಾಣೆಯಾಗಿದ್ದರ ಕುರಿತು ನಿನ್ನೆ ಮನಗೂಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇಂದು ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣುಮಗುವಿನ ಶವ ಪತ್ತೆಯಾಗಿವೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಸ್ಥಳಿಯರು ಹಾಗೂ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಮನಗೂಳಿ ಪೊಲೀಸ್ ಠಾಣೆಯ ಪಿಎಸ್‌ಐ ಪರಶುರಾಮ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದ್ದು ದೂರು ದಾಖಲಿಸಿಕೊಂಡಿದ್ದಾರೆ.

ವರದಿ : ಮುಹಮ್ಮದ ನಾಸೀರ ಇನಾಮದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ