ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅವರು ನೂತನವಾಗಿ ಆಯ್ಕೆಯಾದ ನಾಗರಾಜ್ ರವರಿಗೆ ಹೂವಿನ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಎಸ್ ಟಿ ಘಟಕದ ಅಧ್ಯಕ್ಷರಾಗಿ ನೂತನವಾಗಿ ಕೌದಳ್ಳಿ ನಾಗರಾಜ್ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ಈ ದೇಶದ ಮೂಲೆ ಮೂಲೆಯಲ್ಲೂ ತನ್ನದೇ ಆದ ಛಾಪು ಮೂಡಿಸಿದೆ ಹಾಗೂ ಬಡವರ ಶ್ರಮಿಕರ ದಿನ ದಲಿತರ ಉದ್ದಾರಕ್ಕೆ ದುಡಿದ ಪಕ್ಷವಾಗಿದೆ ಅಂತಹ ಪಕ್ಷದಲ್ಲಿ ಸ್ಥಾನ ಮಾನ ಪಡೆದುಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ, ಪಕ್ಷ ನೀಡಿರುವ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿಕೊಂಡು ಹೋಗಿ ಎಂದು ತಿಳಿಸಿದ್ದರು.
ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾದ ನಾಗರಾಜ್ ನನ್ನ ನಂಬಿ ನಮ್ಮ ನಾಯಕರಾದ ನರೇಂದ್ರ ರಾಜೂಗೌಡರವರು ಅಧ್ಯಕ್ಷ ಸ್ಥಾನ ಕೊಡಿಸಿದ್ದಾರೆ, ಮುಂದಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿಯುತ್ತೇನೆ ಹಾಗೂ ಉತ್ತಮ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ರಾಮಪುರ ಬ್ಲಾಕ್ ಅಧ್ಯಕ್ಷ ಈಶ್ವರ್, ಪ್ರಧಾನ ಕಾರ್ಯದರ್ಶಿ ಉದ್ದನೂರು ಸಿದ್ದರಾಜು, ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಎಸ್ ಟಿ ಘಟಕದ ಅಧ್ಯಕ್ಷ ನಾಗರಾಜ್, ಬಂಡಳ್ಳಿ ಅರುಣ್ ಕುಮಾರ್, ವೆಂಕಟೇಶ್, ಜಗಧೀಶ್ ನಾಯಕ, ಪುಟ್ಟವಿರ ನಾಯಕ ಶಿವರಾಮ್ ಶ್ರೀನಿವಾಸ್ ನಾಯಕ, ಮುತ್ತಪ್ಪ ನಾಯಕ ಸಿದ್ದರಾಜು ನಾಯಕ, ಮಲ್ಲೇಶ್, ಇನ್ನಿತರರು ಇದ್ದರು.
ವರದಿ ಉಸ್ಮಾನ್ ಖಾನ್