ಚಾಮರಾಜನಗರ/ಹನೂರು : ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡಬೇಕಾಗಿದೆ ಹೀಗಾಗಿ ಇಲಾಖೆವಾರು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ಕನ್ನಡ ರಾಜ್ಯೋತ್ಸವದ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡುತ್ತಾ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ. ವಿವಿಧ ಇಲಾಖೆ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಅಚ್ಚು ಕಟ್ಟಾಗಿ ನಿರ್ವಹಿಸಬೇಕು, ನಮ್ಮ ಕ್ಷೇತ್ರದ ಪ್ರವಾಸಿ ತಾಣಗಳ ಬಗ್ಗೆ ಹಾಗೂ ಕಾರ್ಯಕ್ರಮವನ್ನು ರೂಪಿಸಿ ವಿಭಿನ್ನವಾಗಿ ಆಚರಣೆ ಮಾಡಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ಸಲಹೆ ಸೂಚನೆ ಗಳನ್ನು ನೀಡಬೇಕು.
ಕನ್ನಡ ಸಂಸ್ಕೃತಿ ಇಲಾಖೆಯೊಂದಿಗೆ ಚರ್ಚೆ ನಡೆಸಿ, ತಾಲ್ಲೂಕು ಮಟ್ಟದಲ್ಲಿ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ವನ್ನು ಅಯೋಜನೆ ಮಾಡಬೇಕು ಎಂದು ಹೇಳಿದರು.
ಆರ್ ಎಂ ಸಿ ಆವರಣದಿಂದ ಕಲಾ ತಂಡಗಳ ಮೂಲಕ ಕನ್ನಡಾಂಬೆಯ ಭಾವ ಚಿತ್ರ ಮೆರವಣಿಗೆಯನ್ನು ಮಾಡಬೇಕು ಕ್ಷೇತ್ರದ ಹಾಗೂ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಸ್ತಬ್ದ ಚಿತ್ರ ಮೆರವಣಿಗೆ ಕಾರ್ಯಕ್ರಮ ಹಾಗೂ ಬಳಿಕ ವೇದಿಕೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುವುದು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ
ಈ ನಿಟ್ಟಿನಲ್ಲಿ ಅಧಿಕಾರಿಗಳು ಹೋರಾಟಗಾರರು ಸಹಕಾರ ನೀಡಬೇಕು ಎಂದು ತಿಳಿಸಿದರು.
ಡಾ ರಾಜ್ ಕುಮಾರ್ ಅವರ ಹುಟ್ಟುಊರು ಈ ನಿಟ್ಟಿನಲ್ಲಿ ಅವರ ಜೀವನ ಚರಿತ್ರೆ ಕುರಿತು ಅರಿವು ಮೂಡಿಸಿ ಎಂದು ಸ್ಮರಿಸಿ ಪ್ರಸ್ತಾಪಿಸಿದರು. ಹನೂರು ಪಟ್ಟಣದಲ್ಲಿ ವಿದ್ಯುತ್ ಇಲಾಖೆ ಯಿಂದ ಮುಖ್ಯ ರಸ್ತೆಯಲ್ಲಿ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗುರುಪ್ರಸಾದ್,
ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುಂತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಮುಖ್ಯಾಧಿಕಾರಿ ಅಶೋಕ್ ಕುಮಾರ, ಸದಸ್ಯರಾದ ಸೋಮಶೇಖರ್, ಮಹೇಶ್, ತಾಲ್ಲೂಕು ದೈಹಿಕ ಪರಿವಿಕ್ಷಕ ಮಹದೇವ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಕೇಶವ ಮೂರ್ತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ, ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಂಜಮಣಿ, ಚೆಸ್ಕಾಂ ಇಲಾಖೆ ಎ,ಇ ರಂಗಸ್ವಾಮಿ, ಅಗ್ನಿ ಶಾಮಕದಳದ ಮಹೇಶ್, ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ, ಸಿಬ್ಬಂದಿ ಕಾವ್ಯ, ಹಾಗೂ ರೈತ ಮುಖಂಡರುಗಳು ಹಾಗೂ ಕನ್ನಡ ಪರ ಸಂಘಟನೆ ವಿನೋದ್ ,ರಾಯಿಲ್, ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.