ಬೆಂಗಳೂರು:ಕರ್ನಾಟಕ ಸರ್ಕಾರದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ.ನಾಗಲಕ್ಷ್ಮಿ ಚೌದರಿ ಮೇಡಂ ಅವರು ರಾಜ್ಯಮಟ್ಟದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಾ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಿ ರಾಜ್ಯದ ಎಷ್ಟೋ ಹೆಣ್ಣು ಮಕ್ಕಳ ಬಾಳಿಗೆ ಬೆಳಕಾಗಿ ಕರ್ನಾಟಕ ರಾಜ್ಯದ ಪ್ರತಿಯೊಂದು ಜಿಲ್ಲೆ, ಪ್ರತಿಯೊಂದು ತಾಲೂಕು ಪ್ರತಿಯೊಂದು ಹಳ್ಳಿಯಲ್ಲಿ ಸಂಚಾರ ಮಾಡಿ ಒಳ್ಳೆಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದಾರೆ ಅಡ್ಡದಾರಿ ಹಿಡಿದ ಅಧಿಕಾರಿಗಳಿಗೆ ಚಳಿ ಬಿಡಿಸುವಂತಹ ಕೆಲಸ ಡಾ. ನಾಗಲಕ್ಷ್ಮಿ ಚೌದರಿ ಮೇಡಂ ಅವರು ಮಾಡಿದ್ದಾರೆ ಅದೇ ರೀತಿಯಾಗಿ ನೊಂದ ಜನರ ಸಂಕಷ್ಟದಲ್ಲಿ ಭಾಗಿಯಾಗಿ ನೈತಿಕ ಆತ್ಮಸ್ಥೈರ್ಯ ತುಂಬುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಯಧ್ಯಕ್ಷರಾದ ಮಾಳಿಂಗರಾಯ ಕಾರಗೊಂಡ ಅವರು ಈ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಬೆಂಗಳೂರು ಜಿಲ್ಲೆಯ ಚಾಮರಾಜನಗರದಲ್ಲಿ ಶ್ರೀಮತಿ ಡಾ ನಾಗಲಕ್ಷ್ಮಿ ಚೌಧರಿ ಮೇಡಂ ಅವರಿಗೆ ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯಗಳು ಕೋರಿ ಗೌರವ ಪೂರ್ವಕವಾಗಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಯಡ್ರಾಮಿ ತಾಲೂಕಿನ ಸಮಾಜ ಸೇವಕರಾದ ಶ್ರೀಧರ್ ಕುಳಗೇರಿ ಇನ್ನಿತರ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ