ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡದಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಕೆ

ಚಿಕ್ಕೋಡಿ :ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಯಿಂದ ಮನವಿ.
ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ನಾಡದ್ರೋಹಿ ಎಂ.ಈ.ಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರದಲ್ಲಿ ಅವಕಾಶ ನೀಡಬಾರದು,ಅನುಮತಿ ನೀಡುವುದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮಧ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಈ ಕುರಿತು ಸರಕಾರಕ್ಕೆ ಉಪ ವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ ಕನ್ನಡಿಗರ ಮನವಿಯನ್ನು ಧಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು, ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ರಾಜ್ಯೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂ.ಈ.ಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರನ್ನು ಮುಂಜಾಗ್ರತೆಯಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಮೇಶ ಡಂಗೇರ,ಸಂತೋಷ ಪೂಜೇರಿ, ದುಂಡಪ್ಪ ಬಡಿಗೇರ, ಅಮೂಲ ನಾವಿ, ರುದ್ರಯ್ಯ ಹಿರೇಮಠ, ಕುಮಾರ ಪಾಟೀಲ, ಸೌರಭ ಹಿರೇಮಠ, ಮಂಜುನಾಥ ಬಾನಸೆ, ಚನ್ನಪ್ಪ ಬಡಿಗೇರ ಹಾಗೂ ಇತರ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ