ಬೆಂಗಳೂರು: ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಹಾಗೂ ಅವರಿಗೆ ಮಾರುಕಟ್ಟೆ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಡಿಸುವ ದೃಷ್ಟಿಯಿಂದ ಹೆಚ್ ಎಸ್ ಆರ್ ಏಳನೆಯ ಸೆಕ್ಟರ್ ರೆಸಿಡೆನ್ಸ್ ವೆಲ್ ಫೇರ್ ಅಸೋಸಿಯೇಶನ್ ರವರು ಒಂದು ದಿನದ ದೀಪಾವಳಿ ಉತ್ಸವವನ್ನು ಏರ್ಪಡಿಸಿದ್ದಾರೆ. ಉತ್ಸವವು ದಿನಾಂಕ ೨೦೨೪ ಅಕ್ಟೋಬರ್ ೨೭ ರಂದು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ ಒಂದು ಗಂಟೆಗೆ ಮುಕ್ತಾಯವಾಗಲಿದೆ.
ಈ ಉತ್ಸವದಲ್ಲಿ ಮಹಿಳಾ ಉದ್ಯಮಿಗಳಿಂದ ತಯಾರಿಸಲ್ಪಟ್ಟ ವಿವಿಧ ಉತ್ಪನ್ನಗಳಾದ ಸಿದ್ಧ ಉಡುಪುಗಳು, ಗೃಹಲಂಕಾರ, ಟೆರಾಕೋಟ, ಪರಿಸರ ಸ್ನೇಹಿ, ಚಿತ್ರಕಲೆ, ಕುಂಭಕಲೆ, ಕರಕುಶಲ, ಆಹಾರ, ಉಣ್ಣೆ , ಪ್ರಸಾಧನ ಇತ್ಯಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಿದ್ದು, ಈ ಉತ್ಸವದಲ್ಲಿ ೩೦ ಮಹಿಳಾ ಉದ್ಯಮಿಗಳು ಭಾಗವಹಿಸಲಿದ್ದಾರೆ. ಈ ಉತ್ಸವವನ್ನು ಕೆನರಾ ಬ್ಯಾಂಕ್ ಪ್ರಾಯೋಜಿಸಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ