ಹನೂರು : ಬಂದಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು 13 ವಾರ್ಡಗಳಿಗೂ ಸಮನಾಗಿ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲು ಅಧಿಕಾರಿ ಮತ್ತು ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಮತ್ತು ಸದಸ್ಯರುಗಳು ಒಮ್ಮತದಿಂದ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಪಟ್ಟಣ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ
ಪಟ್ಟಣ ಪಂಚಾಯಿತಿಯಲ್ಲಿ ಪದೇ ಪದೇ ಬದಲಾವಣೆಯಾಗುತ್ತಿರುವ ಅಧಿಕಾರಿಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಬರುವಂತಹ ಅಧಿಕಾರಿಗಳು ಇಲ್ಲಿನ ಜನಪ್ರತಿನಿಧಿ ಅಧಿಕಾರಿಗಳನ್ನು ಸಿಬ್ಬಂದಿ ವರ್ಗದವರನ್ನು ವಿಶ್ವಾಸಕ್ಕೆ ಪಡೆದು ವಿಶೇಷ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ಸಾರ್ವಜನಿಕರ ಮೂಲಭೂತ ಸೌಲಭ್ಯಗಳಿಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಯುಜುಡಿ ಜೊತೆ ರಸ್ತೆ ಅಭಿವೃದ್ಧಿ ಆಗಬೇಕು :
ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಯುಜುಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಸರ್ಕಾರದ ಅನುದಾನವನ್ನು ಬಳಸಿಕೊಂಡು ಯುಜಿಡಿ ಜೊತೆ ರಸ್ತೆ ಅಭಿವೃದ್ಧಿಗೆ ನೀಲ ನಕಾಶೆ ತಯಾರಿಸಿ ಇಲ್ಲಿನ ಅಧಿಕಾರಿ ಸಿಬ್ಬಂದಿ ವರ್ಗದವರು ವರದಿ ನೀಡಲು ಸಹಕಾರ ನೀಡಬೇಕು ಜೊತೆಗೆ ಇಲ್ಲಿನ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವ ಮೂಲಕ ಕ್ರಮ ವಹಿಸಬೇಕು ಎಂದು ತಿಳಿಸಿದರು
ಮುಖ್ಯ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಗಳು :
ಈ ಹಿಂದೆ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಎರಡೂವರೆ ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೆ ಎರಡುವರೆ ವರ್ಷ ಬೇಕೆ ಎಂದು ತರಾಟೆಗೆ ತೆಗೆದುಕೊಂಡರು ಬರುವಂತ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳದೆ ಒಬ್ಬರ ಮೇಲೆ ಒಬ್ಬರು ದೂರನ್ನು ಹೇಳದೆ ಪಂಚಾಯಿತಿಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳ ಮಾಡುವ ಮೂಲಕ ಅಭಿವೃದ್ಧಿಗೂ ಒತ್ತು ನೀಡಬೇಕು ಎಂದು ತಿಳಿಸಿದರು.
ಇಂದಿರಾ ಕ್ಯಾಂಟೀನ್ ತೆರೆಯಲು ಕ್ರಮ ಕೈಗೊಳ್ಳಿ : ಸದಸ್ಯ ಸುದೇಶ್ ಮನವಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆಯ ಬಳಿ ನಿವೇಶನ ನಿಗದಿ ಮಾಡಿದ್ದು ಕೂಡಲೇ ತೆರವುಗೊಳಿಸಿ ಇಂದಿರಾ ಕ್ಯಾಂಟೀನ್ ತೆರೆಯಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು ಜೊತೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಂಜೆ ಐದರ ನಂತರ ಇಲ್ಲಿನ ಅಧಿಕಾರಿ ಸಿಬ್ಬಂದಿ ವರ್ಗದವರು ಯಾರು ಸಹ ಇರುವುದಿಲ್ಲ ಆರೋಗ್ಯ ಹದಗೆಟ್ಟರೆ ಖಾಸಗಿ ಆಸ್ಪತ್ರೆಗಳಿಗೆ ತೆರಳಬೇಕಾಗಿದೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸದಸ್ಯ ಹರೀಶ್ ಕುಮಾರ್ ಮಾತನಾಡಿ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳ ಕೆಲಸ ಕಾರ್ಯಗಳಿಗೆ ಇಲ್ಲಿನ ಅಧಿಕಾರಿ ಸಿಬ್ಬಂದಿ ವರ್ಗದವರು ಜನಪ್ರತಿನಿಧಿಗಳಿಗೆ ಸ್ಪಂದಿಸುತ್ತಿಲ್ಲ ಹೀಗಾಗಿ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಸ್ವಚ್ಛತೆಗೂ ಆದ್ಯತೆ ನೀಡುತ್ತಿಲ್ಲ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸೋಮಶೇಖರ್ ಹತ್ತನೇ ವಾರ್ಡಿನ ಸದಸ್ಯ ಮಾತನಾಡಿ ಪಟ್ಟಣ ಪಂಚಾಯತಿ ವ್ಯಾಪ್ತಿಯ 10ನೇ ವಾರ್ಡಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಸದಸ್ಯರಾದ ಮಹೇಶ್, ಸುದೇಶ್ ,ಸೋಮಶೇಖರ್, ರೂಪ, ಮಮತಾ, ಪವಿತ್ರ ಪ್ರಸನ್ನ,ಮಹೇಶ್ ನಾಯಕ್ ,ಹಾಗೂ ತಹಸಿಲ್ದಾರ್ ಗುರುಪ್ರಸಾದ್, ಮುಖ್ಯ ಅಧಿಕಾರಿ ಅಶೋಕ್ ,ಹಾಗೂ ಯುಸಿಡಿ ಎ ಇ ಇ ರಾಮಚಂದ್ರ ,ಇಂಜಿನಿಯರ್ ನಾಗೇಂದ್ರ ಪಟ್ಟಣ ಪಂಚಾಯಿತಿ ಸದಸ್ಯರುಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್