ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

2023 24ನೇ ಸಾಲಿನ ವಿದ್ಯಾರ್ಥಿ ವೇತನ,ಪ್ರತಿಭಾ ಪುರಸ್ಕಾರ ಹಾಗೂ ಉತ್ತಮ ಶಿಕ್ಷಕರಿಗೆ ಅಭಿನಂದನಾ ಸಮಾರಂಭ

ಪಾವಗಡ:ತಾಲೂಕಿನ ಗಡಿ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಳೆದ 22ವರ್ಷದಿಂದ ಸಂಸ್ಥೆಯಿಂದ ಪ್ರೋತ್ಸಾಹ ಕಾರ್ಯದರ್ಶಿ ಆರ್‌.ಪಿ.ಸಾಂಬಸದಾಶಿವರೆಡ್ಡಿ ಅಭಿಮತ

ಪಾವಗಡ : ಗಡಿ ಭಾಗದ ತಾಲೂಕಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಿನ್ನಲೆಯಲ್ಲಿ ಕಳೆದ 22 ವರ್ಷಗಳಿಂದ ಸಂಸ್ಥೆ ಪ್ರತಿಭಾ ಪುರಸ್ಕಾರದ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಪಾವಗಡ ತಾಲೂಕು ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆರ್‌.ಪಿ.ಸಾಂಬ ಸದಾಶಿವರೆಡ್ಡಿ ಹೇಳಿದರು.

ಪಾವಗಡ ತಾಲೂಕು ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಶನಿವಾರ ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಂಡಿದ್ದ 2023 24ನೇ ಸಾಲಿನ ವಿದ್ಯಾರ್ಥಿ ವೇತನ,ಪ್ರತಿಭಾ ಪುರಸ್ಕಾರ ಹಾಗೂ ಉತ್ತಮ ಶಿಕ್ಷಕರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ತಾಲೂಕು ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕ್ರತಿಕ ಸಂಸ್ಥೆ ಅನೇಕ ವರ್ಷದಿಂದ ತಾಲೂಕಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದು ಎಲ್ಲರ ಸಹಕಾರದ ಮೇರೆಗೆ ಹಲವಾರು ಕಾರ್ಯಕ್ರಮಗಳೊಂದಿಗೆ ಪ್ರೋತ್ಸಾಹಿಸಲಾಗುತ್ತಿದೆ.ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದೆ.ಮುಂದೆಯೂ ಸಹ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಒತ್ತು ನೀಡಿ ಸಂಸ್ಥೆ ಸೇವೆ ಸಲ್ಲಿಸಲಿರುವುದಾಗಿ ತಿಳಿಸಿದ ಅವರು ತಾಲೂಕಿನ ನಿರುದ್ಯೋಗಿಗಳಿಗೆ ಆರೋಗ್ಯ ಕೇಂದ್ರಗಳು ಮತ್ತು ವಿದ್ಯಾರ್ಥಿಗಳಲ್ಲಿ ಚಿಂತನಾ ಶೀಲತೆಯನ್ನು ಮೂಡಿಸುವುದು ಮತ್ತು ಜ್ಞಾನವನ್ನು ಹೆಚ್ಚಿಸುವುದರ ಸಲುವಾಗಿ ಹಲವು ರೀತಿಯದಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಚರ್ಚಾ ಸ್ಪರ್ಧೆ ಆಶುಭಾಷಣ ಸ್ಪರ್ಧೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,ಇದರಿಂದ ವಿದ್ಯಾರ್ಥಿಗಳು ಓದಲು ಆಸಕ್ತಿಯನ್ನು ಮೂಡಿಸುವುದು ಇವುಗಳ ಉದ್ದೇಶವಾಗಿರುವುದಾಗಿ ತಿಳಿಸಿದರು.ಸಂಸ್ಥೆಯ ಅನೇಕ ಪ್ರಗತಿ ಕಾರ್ಯಕ್ರಮಗಳ ಕುರಿತು ವಿವರಿಸಿದ ಅವರು ಗಡಿ ಭಾಗದ ತಾಲೂಕಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಂಸ್ಥೆ ಪ್ರೋತ್ಸಾಹದಾಯಕವಾಗಿದೆ ಎಂದರು.

ಇದೇ ವೇಳೆ 2023 24 ನೇ ಸಾಲಿನ ಸ್ನಾತಕೋತ್ತರ ಪದವಿಯಲ್ಲಿ ಮೊದಲ ರಾಂಕ್ ಹಾಗೂ ಚಿನ್ನದ ಪದಕ ಪಡೆದಿರುವಂತಹ ತಾಲೂಕಿನ ವಿದ್ಯಾರ್ಥಿಗಳಾದ ರಾಮು,ಮೂರು ಚಿನ್ನದ ಪದಕಗಳಿಸಿದ ಕೆ.ಪಿ.ಪವಿತ್ರಾ,ಎರಡು ಚಿನ್ನದ ಪದಕ ಪಡೆದ ನಾಗೇಂದ್ರ ಹಿಮಶ್ರೀ,ಸುಮತಿ ಇವರನ್ನು ಸಮಾರಂಭದಲ್ಲಿ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪಾವಗಡ ತಾ,ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕ್ರತಿಕ ಸಂಸ್ಥೆಯ ಅಧ್ಯಕ್ಷ ಎಸ್. ಕೆ.ವೆಂಕಟರೆಡ್ಡಿ ಹಾಗೂ ಅಧ್ಯಕ್ಷತೆವಹಿಸಿದ್ದು ಸಂಸ್ಥೆಯ ಕೆ.ಬಿ.ಪತಿ ಉಪಸ್ಥಿತಿ
ಡಾ.ಪಿ.ಗೋವಿಂದಪ್ಪ,ಡಾ.ಪರಮೇಶ್‌ನಾಯ್ಕ್‌,
ಶಿಕ್ಷಣ ಸಮಿತಿ ಸಂಚಾಲಕರಾದ ಡಾ.ಬಿ.ಎ.ವೆಂಕಟೇಶಲು ಆರ್.ಟಿ.ಖಾನ್,ಶಿಕ್ಷಕರಾದ ಆರ್‌.ಎಂ.ನರಸಿಂಹ,ನಿವೃತ್ತ ಬ್ಯಾಂಕ್‌ ವ್ಯವಸ್ಥಾಪಕ ಪಾವಗಡದ ದೈವದೀನಂ ಹಾಗೂ ಇತರೆ ಅನೇಕ ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪಾವಗಡ ತಾಲೂಕು ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕ್ರತಿಕ ಸಂಸ್ಥೆ ವತಿಯಿಂದ ಉತ್ತಮ ಶಿಕ್ಷಕರು ಹಾಗೂ 2023 24 ನೇ ಸಾಲಿನ ಸ್ನಾತಕೋತ್ತರ ಪದವಿಯಲ್ಲಿ ಮೊದಲ ರಾಂಕ್ ಹಾಗೂ ಚಿನ್ನದ ಪದಕ ಪಡೆದಿರುವಂತಹ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ವರದಿ ಪಾವಗಡ ಕೆ. ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ