ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ

ಶಿವಮೊಗ್ಗ: ಕನ್ನಡ ಅತ್ಯಂತ ಸುಂದರವಾದ ಸುಲಲಿತವಾದ ಎಲ್ಲರೂ ಒಪ್ಪುವ ಮೊದಲುವಾದ ಭಾಷೆ ನಮ್ಮ ಕನ್ನಡ ಈ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ ಇಂದು ಪಶ್ಚಿಮಾತ್ಯ ಭಾಷೆಯಿಂದ ಕನ್ನಡ ಭಾಷೆಯನ್ನು ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ ಕನ್ನಡ ಭಾಷೆಯನ್ನು ಮಾತನಾಡಿದರೆ ನಮಗೆ ಗೌರವವಾಗುತ್ತದೆ ಎಂದು ಅನ್ನುವಂತಹ ಸಾಕಷ್ಟು ಜನ ನಮ್ಮ ಮಧ್ಯೆ ಇದ್ದಾರೆ. ಅನ್ಯ ಭಾಷೆಯನ್ನು ಪ್ರೀತಿಸಿ ಕನ್ನಡದಲ್ಲಿ ನಮ್ಮ ನಡೆ-ನುಡಿ ವ್ಯವಹಾರ ನಡೆಯಬೇಕು ಕನ್ನಡವನ್ನು ಉಳಿಸಿ ಬೆಳೆಸಿ ಅನ್ನುವುದಕ್ಕಿಂತ ಕನ್ನಡವನ್ನು ನಾವು ಬಳಸಬೇಕು. ಈ ಭಾಷೆಗೆ ನೂರಾರು ಜನ ಕವಿ ಸಾಧಕರು ಲೇಖಕರು ತಮ್ಮದೇ ಆದ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ನುಡಿದರು ಅವರು ಇಂದು ಎಲ್‌ಎಲ್‌ಆರ್ ರಸ್ತೆಯ ಕುಡಿಯುವ ನೀರಿನ ಘಟಕದ ಬಳಿ ಸ್ನೇಹ ಮಯಿ ಸಂಘದ ವತಿಯಿಂದ ಆಯೋಜಿಸಲಾದ 69ನೇ ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು
ಇದೇ ಸಂದರ್ಭದಲ್ಲಿ ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಯೋಗೀಶ್ ಅವರು ಮಾತನಾಡುತ್ತಾ ಸ್ನೇಹಮಹಿ ಸಂಘ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವುದರ ಜೊತೆಗೆ ರಾಷ್ಟ್ರೀಯ ಹಬ್ಬಗಳು ಹಾಗೂ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಮಾಡುತ್ತಾ ಬಂದಿರುವುದಲ್ಲದೆ ವಿಶೇಷವಾಗಿ ಚಿನ್ನಪ್ಪನವರು ಯಾವುದೇ ಪಲಾಪೇಕ್ಷೆ ಇಲ್ಲದೆ ತಮ್ಮ ಸೇವಾ ಕಾರ್ಯವನ್ನು ನಿರಂತರವಾಗಿ ನಡೆಸುತ್ತಾ ಬಂದಿದ್ದಾರೆ ಮತ್ತೋರ್ವ ಮುಖ್ಯ ಅತಿಥಿಯಾದ ಶಿವಾಜಿನ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ಅವರು ಮಾತನಾಡುತ್ತಾ ಈಗಾಗಲೇ ಸ್ನೇಹಮ ಈ ಸಂಘದ ವತಿಯಿಂದ ಕರೋನಾ ಸಂದರ್ಭದಲ್ಲಿ ಸುನಾಮಿ ಸಂದರ್ಭದಲ್ಲಿ ಅತಿ ಹೆಚ್ಚು ಮನುಕುಲದ ಸೇವಾ ಕಾರ್ಯಗಳನ್ನು ಮಾಡುತ್ತ ಬಂದಿರುವುದಲ್ಲದೆ ರಾಜ್ಯ ರಾಷ್ಟ್ರಮಟ್ಟದ ಕ್ರೀಡೆಗಳನ್ನು ಆಯೋಜಿಸುವುದರ ಮುಖಾಂತರ ಜನಮಾನಸವನ್ನು ತಲುಪಿದೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಸ್ ಚಿನ್ನಪ್ಪನವರು ವಹಿಸಿ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ಜರುಗಿದ ರಾಷ್ಟ್ರಮಟ್ಟದ ಏರೋಬಿಕ್ ಸ್ಪರ್ಧೆಯಲ್ಲಿ ಶಿವಮೊಗ್ಗ ನಗರದ ರಿಷಿಕಾ ಎಸ್ ಚಿನ್ನದ ಪದಕ ಗಳಿಸಿ ಗೌರವ ತಂದ ಇವರಿಗೆ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸಿನ ಹಿರಿಯ ಸದಸ್ಯರಾದ ನಾದನ್ ಜಯಶೀಲನ್, ಕಾರ್ಯದರ್ಶಿ ರವಿ ಕುಮಾರ್, ಮೊಹಮ್ಮದ್, ಪವನ್, ವಿಜಯಕುಮಾರ್ ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ