ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಒನಕೆ ಓಬವ್ವಳನ್ನು ಸಾಧನೆಗೆ ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು:ಶಾಸಕ ಡಾ.‌ ಶ್ರೀನಿವಾಸ್. ಎನ್. ಟಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ತಾಲೂಕು ಆಡಳಿತ ವತಿಯಿಂದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ಹಾಗೂ ತಹಶೀಲ್ದಾರರು,ಕಾರ್ಯನಿರ್ವಾಹಕ ದಂಡಾಧಿಕಾರಿಗಳು, ಸಮುದಾಯ ಕುಲಬಾಂಧವರು, ಜನಪ್ರತಿನಿಧಿಗಳು, ಊರಿನ ಗಣ್ಯರು ಸೇರಿ ದಿ. 11-11-2024 ರಂದು ತಾಲೂಕು ಕಛೇರಿಯಲ್ಲಿ ವೀರವನಿತೆ ಒನಕೆ ಓಬವ್ವ 304 ನೇ ಜಯಂತ್ಯೋತ್ಸವ ನಿಮಿತ್ತ ಅವರ ಭಾವಚಿತ್ರಕ್ಕೆ ಗೌರವ ಮತ್ತು ಪೂಜ್ಯನೀಯವಾಗಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರು ಮಾತನಾಡುತ್ತಾ, ವೀರವನಿತೆ ಒನಕೆ ಓಬವ್ವ ನವರು ಶೌರ್ಯ, ಸಾಹಸ, ತ್ಯಾಗದಿಂದ ನಾಡಿನ ಒಳಿತಿಗಾಗಿ ಅಮರರಾದವರು. ಇಂತಹ ಮಹನೀಯರನ್ನು ಆದರ್ಶವನ್ನಾಗಿ ಇಟ್ಟುಕೊಂಡು ಸಾಮಾಜಿಕವಾಗಿ ಬದಲಾವಣೆಯ ದಾರಿಯಲ್ಲಿ ಸಾಗೋಣ ಎಂದರು. ಇಂದಿನ ತಲೆಮಾರಿನ ಮಹಿಳೆಯರು ಒನಕೆ ಓಬವ್ವನವರನ್ನು ಪ್ರೇರಣೆ ಮತ್ತು ಸ್ಪೂರ್ತಿಯಾಗಿ ತೆಗೆದುಕೊಂಡು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶದ ಒಳ್ಳೆಯ ಪ್ರಜೆಗಳಾಗಿ ಬಾಳಬೇಕು ಹಾಗೂ ನಮ್ಮ ಕೂಡ್ಲಿಗಿ ತಾಲೂಕಿನ ಮನೆ ಮಗಳು ಓಬವ್ವ ಎಂದೂ ಹೇಳಿದರು. ಈ ವೇಳೆ ತಹಶೀಲ್ದಾರರಾದ ಎಂ. ರೇಣುಕಾ, ಉಪ ತಹಶೀಲ್ದಾರರಾದ ನೇತ್ರಾವತಿ, ವಿವಿಧ ಇಲಾಖೆಯ ಅಧಿಕಾರಿಗಳು, ಪ. ಪಂ. ಅಧ್ಯಕ್ಷರಾದ ಶ್ರೀ ಕಾವಲ್ಲಿ ಶಿವಪ್ಪ ನಾಯಕ, ಸರ್ವ ಸದಸ್ಯರು, ಮುಖಂಡರು, ಸಮುದಾಯ ಕುಲಬಾಂಧವರು ಉಪಸ್ಥಿತರಿದ್ದರು.

ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!