ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಒನಕೆ ಓಬವ್ವ ಒಬ್ಬ ವೀರ ಮಹಿಳೆ – ಚಂದ್ರಭೂಪಾಲ್

ಶಿವಮೊಗ್ಗ : ಚಿತ್ರದುರ್ಗದ ಒನಕೆ ಓಬವ್ವ ಒಬ್ಬ ವೀರ ಮಹಿಳೆ. ಅವರ ಹೋರಾಟ ಅವಿಸ್ಮರಣಿಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್ ತಿಳಿಸಿದರು.
ಅವರು ಇಂದು ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ವೀರ ರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒಬ್ಬ ಸಾಮಾನ್ಯ ಮಹಿಳೆ ಶತ್ರುಗಳ ದಾಳಿಯಿಂದ ಒಂದು ಸಂಸ್ಥಾನವನ್ನು ಉಳಿಸಿ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಗೌರವಿಸಲ್ಪಟಿದ್ದಾರೆ. ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಜಗನ್ನಾಥ ಕೆ ಡಾಂಗೆ ಅವರು ಓಬವ್ವನ ಕುರಿತು ಉಪನ್ಯಾಸ ನೀಡಿದ ಅವರು, ನಮ್ಮ ದೇಶದಲ್ಲಿ ಅನೇಕ ರಾಣಿಯರು ಹೋರಾಟವನ್ನು ಮಾಡಿರುವ ಕುರಿತು ಓದಿದ್ದೇವೆ ಆದರೆ ಒಬ್ಬ ಸಾಮಾನ್ಯ ಮಹಿಳೆಯಾದ ಒನಕೆ ಓಬವ್ವ ಹೋರಾಟ ಅತ್ಯಂತ ರೋಮಾಂಚಕವಾಗಿದೆ. ಮಹಿಳೆಯರಿಗೆ ಗೌರವ ಸ್ಥಾನಮಾನ ಗೌರವ ಇಲ್ಲದ ಸಂದರ್ಭದಲ್ಲಿ ಹೈದಾರ್ ಆಲಿ ಸೈನ್ಯದ ವಂಚನೆಯ ದಾಳಿಯಿಂದ ಚಿತ್ರದುರ್ಗ ಸಂಸ್ಥಾನವನ್ನು ರಕ್ಷಿಸುವ ಮೂಲಕ ಇಂದಿಗೂ ಒನಕೆ ಓಬವ್ವನ ಹೆಸರು ಅಜರಾಮರವಾಗಿದೆ ಎಂದರು.
ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಓಬವ್ವನವರ ಜೀವನ ಯೋಶೋಗಾಥೆಯನ್ನು ಮಕ್ಕಳಿಗೆ ತಿಳಿಸಬೇಕು. ಸರ್ಕಾರ ಪಠ್ಯ ಪುಸ್ತಕದಲ್ಲಿ ಪಾಠಗಳ ಮೂಲಕ ಮಕ್ಕಳಿಗೆ ಹೋರಾಟಗಾರನ್ನು ಪರಿಚಯಿಸಬೇಕು. ಮಹಿಳಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹೆಣ್ಣು ಮಕ್ಕಳಿಗೆ ಓಬವ್ವನ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ಥಾಪಿಸಬೇಕು. ಈ ಮೂಲಕ ಅವರ ಹೆಸರನ್ನು ಶಾಶ್ವತವಾಗಿಸುವಂತೆ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಉಮೇಶ್ ಹೆಚ್., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರತ್ನ ಮತ್ತು ಛಲವಾದಿ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ