ವಿಜಯನಗರ ಜಿಲ್ಲೆ ಕೊಟ್ಟೂರು: ದಿ. 18.11.2024 ರಂದು ತಾಲೂಕು ಮಟ್ಟದ ಕನಕದಾಸರ ಜಯಂತಿಯನ್ನು ಆಚರಿಸಲು ತಾಲೂಕ ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಪೂರ್ವಸಿದ್ದತಾ ಸಭೆಯನ್ನು ತಹಶೀಲ್ದಾರರಾದ ಅಮರೇಶ ಜಿ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಲ ಕುಲವೆಂದು ಹೊಡೆದಾಡದಿರಿ ಎಂದು ಜಾತಿ ನಿರ್ಮೂಲನೆಯನ್ನು ಮಾಡಲು ಶ್ರಮಿಸಿದ, ದಾಸ ಶ್ರೇಷ್ಠರಾದ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಾಧಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ಕನಕದಾಸರ ಕುರಿತು ವಿಶೇಷ ಉಪನ್ಯಾಸ ವ್ಯವಸ್ಥೆ ಮಾಡಲು ತಾಲೂಕು ಕುರುಬ ಸಮಾಜದ ಅಧ್ಯಕ್ಷರಾದ ಮೂಗಪ್ಪ ಇವರು ಸಭೆಯಲ್ಲಿ ಮಾಹಿತಿಯನ್ನು ನೀಡಿದರು. ಎಲ್ಲಾ ಸಮುದಾಯದ ಮುಖಂಡರನ್ನು ಹಾಗೂ ಪಟ್ಟಣದ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಕರೆದು ಕಾರ್ಯಕ್ರಮವನ್ನು ನಡೆಸುವಂತೆ ಸಭೆಯಲ್ಲಿ ಸಲಹೆಗಳನ್ನು ನೀಡಿದರು. ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲೇ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸುವಂತೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಬದ್ದಿ ರೇಖಾ ರಮೇಶ್, ಮುಖ್ಯಾಧಿಕಾರಿ ನಸರುಲ್ಲಾ, ಎಪಿಎಂಸಿ ಅಧ್ಯಕ್ಷರಾದ ಹರಾಳು ನಂಜಪ್ಪ, ಡಾ.ಬಿ ಆರ್ ಅಂಬೇಡ್ಕರ್ ಸಂಘದ ತಾಲೂಕ ಅಧ್ಯಕ್ಷರಾದ ಬಿ ದುರುಗೇಶ, ರೈತ ಮುಖಂಡ ಭರಮಣ್ಣ, ಬಿ. ಬಾಬುಲಾಲ್ ಜೈನ ಸಮಾಜದ ಅಧ್ಯಕ್ಷರು ,ಎಂ ಕೆ ಜಲಪೂರ್ , ತಾ ಪಂ ಮ್ಯಾನೇಜರ್ ಪುಷ್ಪಲತಾ ಪಿ ಹಾಗೂ ಇತರೆ ಮುಖಂಡರು ಇದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ