ಬೀದರ/ಚಿಟಗುಪ್ಪಾ: ಕುವೆಂಪು ಭಾಷಾಭಾರತಿ ಪ್ರಾಧಿಕಾರದ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಭಾಜನರಾಗಿರುವ ಪರಮ ಪೂಜ್ಯ ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಬರಹಗಾರರು, ಚಿಂತಕರಾದ ಸಂಗಮೇಶ ಎನ್ ಜವಾದಿ ನುಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ರಚಿಸಿದ ತೌಲನಿಕ ಧರ್ಮ ದರ್ಶನ ಕೃತಿಗೆ ಕುವೆಂಪು ಭಾಷಾ ಭಾರತಿ ಅನುವಾದ ಪ್ರಶಸ್ತಿ ಬಂದಿರುವುದು ಸಂತೋಷದ ಸಂಗತಿ. ಪೂಜ್ಯ ಜಗದ್ಗುರು ಮಹಾಸನ್ನಿಧಿಯವರಿಗೆ ಅನಂತ ಅಭಿನಂದನೆಗಳು ಸಲ್ಲಿಸುತ್ತೇವೆ. ಇವರ ಕೃತಿ ನಾಡಿಗೆ ಮಾದರಿಯಾಗಿದ್ದು, ಇದರಿಂದ ಸಮಾಜಕ್ಕೆ ಅನೇಕ ಪ್ರಯೋಜನಗಳಾಗಲಿವೆ ಎಂದರು.
ಪೂಜ್ಯ ಗುರುಗಳ ಸಾಹಿತ್ಯ ಸೇವೆ ಸಮಾಜದ ಇತರರಿಗೆ ಸ್ಪೂರ್ತಿಯಾಗಲಿ ಎಂದು ಆಶಿಸುತ್ತೇನೆ ಎಂದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.