ಬೀದರ : ಪ್ರಕೃತಿ ಮನುಷ್ಯನ ಜೀವನಕ್ಕೆ ಏನೆಲ್ಲಾ ಕೊಟ್ಟಿಲ್ಲ, ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸುತ್ತಿದ್ದಾನೆ. ಇದು ಮಾನವನ ಅವನತಿಗೆ ಕಾರಣವಾಗಬಹುದು ಎಂದು ಪರಿಸರ ಸಂಘಟನೆಯ ಜಿಲ್ಲಾಧ್ಯಕ್ಷ ಕಾಶಿನಾಥ ಪಾಟೀಲ ಹೇಳಿದರು.
ನಗರದ ಸ್ಪರ್ಧಾ ಅಕಾಡೆಮಿ ಹಾಗೂ ಪರಿಸರಕ್ಕಾಗಿ ನಾವು ಸಂಘಟನೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪರಿಸರ ಇದೇ ರೀತಿ ಹಾನಿಯಾಗಿ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೆದುರೆ ನಡೆಯಲಿದೆ. ಇದು ನಡೆಯಬಾರದೆಂದರೆ ಇಂದಿನಿಂದಲೆ ಪರಿಸರದ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಪರಿಸರದ ಸಂರಕ್ಷಣೆಗಾಗಿ ನಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತುವ ಅವಶ್ಯಕತೆ ಇಲ್ಲ. ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಹಿತಿ, ಪರಿಸರ ಸಂರಕ್ಷಕ ಸಂಗಮೇಶ ಎನ್ ಜವಾದಿ ಮಾತನಾಡಿ ದಿನನಿತ್ಯದ ಜೀವನದ ಮೇಲೆ ಪರಿಸರ ನಾಶದ ಪ್ರಭಾವದ ಬಗ್ಗೆ ಸಾಮಾನ್ಯ ಅರಿವು ಮೂಡಿಸಲಾಗುತ್ತಿದೆ. ನಾವೆಲ್ಲರೂ ಸ್ವಲ್ಪ ಕ್ರಮೇಣವಾಗಿಯಾದರೂ ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವ ಅಗತ್ಯತೆಯನ್ನು ಅರ್ಥಮಾಡಿಕೊಳ್ಳುಬೇಕು, ನಮ್ಮ ಮುಂದಿನ ಪೀಳಿಗೆಯ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ನೈಸರ್ಗಿಕ ಸಂಪನ್ಮೂಲಗಳನ್ನು ಸುಸ್ಥಿರ ರೀತಿಯಲ್ಲಿ ಬಳಸಿಕೊಳ್ಳಬೇಕು. ಪರಿಸರ ಮಾಲಿನ್ಯ ತಡೆಗಾಗಿ ಬರೀ ಸರಕಾರಿ ಇಲಾಖೆಗಳಷ್ಟೇ ಕಾರ್ಯ ನಿರ್ವಹಿಸದರೆ ಸಾಲದು ಸಾರ್ವಜನಿಕರು ಕರ್ತವ್ಯ ಪ್ರವೃತ್ತರಾಗಬೇಕು. ಹಬ್ಬ, ಹರಿದಿನಗಳಲ್ಲಿ ಪಟಾಕಿ ಸಿಡಿಸದೆ, ಪ್ಲಾಸ್ಟಿಕ್ ಬಳಸದೆ ಮಣ್ಣಿನ ದೀಪ ಹಾಗೂ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು. ಸಾಧ್ಯವಾದಷ್ಟು ಮಟ್ಟಿಗೆ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಸಾಮಾನ್ಯರಿಗೆ ಇದರ ಅರಿವು ಮೂಡಿಸುವ ಕೆಲಸ ನಿರಂತರವಾಗಿ ಮಾಡಬೇಕು
ಎಂದು ಹೇಳಿದರು.
ಅತಿಥಿಗಳಾಗಿ ಆಗಮಿಸಿದ ಪ್ರೊ. ಮನೋಜಕುಮಾರ, ಡಾ.ಸುನೀತಾ ಕೂಡ್ಲಿಕರ್,ಆರ್ ಎಸ್ ಬಿರಾದಾರ, ಸತೀಶ್ ಕುಮಾರ್ ರಡ್ಡಿ, ಸ್ವರೂಪ ರಾಣಿ, ರೂಪ ಪಾಟೀಲ ರು ಪರಿಸರ ಸಂರಕ್ಷಣೆ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗೇಶ್ ಸ್ವಾಮಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗಣ್ಯರು, ಶಿಕ್ಷಕರು , ಮಾತೆಯರು ಸೇರಿದಂತೆ ಮಕ್ಕಳು ಹಾಜರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.