ಶಿವಮೊಗ್ಗ : ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ (ಮೆಗ್ಗಾನ್ ಆಸ್ಪತ್ರೆ) ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ
- ಬಿಪಿಎಲ್ ಕಾರ್ಡುದಾರರಿಗೆ ಉಚಿತ ಚಿಕಿತ್ಸೆ ನೀಡಬೇಕಾಗಿರುವುದು ಆಸ್ಪತ್ರೆ ಕರ್ತವ್ಯವಾಗಿದ್ದು, ಆದರೆ ಹಣ ಪಡೆಯುತ್ತಿರುವ ಸಂಗತಿ ಗಮನಕ್ಕೆ ಬಂದಿದ್ದು, ಈ ಕುರಿತು ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
- ಬಿಪಿಎಲ್ ಕಾರ್ಡುದಾರರಿಗೆ ಚಿಕಿತ್ಸೆ ನೀಡುವಲ್ಲಿ ಆಗುತ್ತಿರುವ ವಿಳಂಬ ಮತ್ತು ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿದರು.
- ಆಸ್ಪತ್ರೆಯ ಕೌಂಟರ್ನಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ನಿರ್ದೇಶನ ನೀಡಿದರು.
- ಆಸ್ಪತ್ರೆಯ ಸ್ಕ್ಯಾನಿಂಗ್ ವಿಭಾಗದಲ್ಲಿ ಆಗುತ್ತಿರುವ ವಿಳಂಬದ ಕುರಿತು ನನ್ನ ಗಮನಕ್ಕೆ ಬಂದಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಕಟ್ಟುನಿಟ್ಟಾಗಿ ಸರಿಪಡಿಸುವಂತೆ ಆದೇಶಿಸಿದರು.
- ಆಸ್ಪತ್ರೆಯ ಮೆಡಿಕಲ್ ಸ್ಟೋರ್ ನಲ್ಲಿ ಹಲವಾರು ಔಷಧಿಗಳ ಅಲಭ್ಯತೆ ಬಗ್ಗೆ ಚರ್ಚಿಸಿ ರೋಗಿಗಳ ಅಹವಾಲುಗಳನ್ನು ಸ್ವೀಕರಿಸಿ, ಆಸ್ಪತ್ರೆಯ ಔಷಧಿ ಉಗ್ರಾಣವನ್ನು ಪರಿಶೀಲನೆ ನಡೆಸಿದರು.
- ಆಸ್ಪತ್ರೆಯಲ್ಲಿ ಇರುವಂತಹ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
- ಆಸ್ಪತ್ರೆಯಲ್ಲಿನ ಸ್ವಚ್ಚತೆ ಕುರಿತು ಪರಿಶೀಲನೆ ನಡೆಸಿದರು.
- ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಆರೋಗ್ಯ ವಿಚಾರಿಸಿ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ