ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ದೇವಲ ಮಹರ್ಷಿ ಸಾಂಸ್ಕೃತಿಕ ಭವನದಲ್ಲಿ ನ 26ರಂದು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ ದೋಟಿಹಾಳ ಹಾಗೂ ಕೇಸೂರು ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರುಗಲಿದ್ದು ಎಲ್ಲರೂ ಸಹಕಾರ ನೀಡಬೇಕು ಎಂದು ನೂತನ ಅಧ್ಯಕ್ಷ ನಿಂಗಪ್ಪ ಸಜ್ಜನ ಅವರು ಹೇಳಿದರು.
ತಾಲೂಕಿನ ದೋಟಿಹಾಳ ಗ್ರಾಮದ ಶುಖಮುನಿಸ್ವಾಮಿ ದೇವಸ್ಥಾನದ ಹತ್ತಿರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಣೆ ಮಾಡುತ್ತಿದ್ದು ಹಾಗೂ ಕಸಾಪ ಹೋಬಳಿ ಘಟಕದ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು ಪದಗ್ರಹಣ ಕಾರ್ಯಕ್ರಮದಲ್ಲಿ ನಡೆಯಲಿದೆ ಎಂದರು.
2024 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಆಗಮಿಸಲಿದ್ದು ಅವರಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು. ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಚಂದ್ರಶೇಖರ ದೇವರು ವಹಿಸಲಿದ್ದು ಉದ್ಘಾಟಕರಾಗಿ ಶಾಸಕ ದೊಡ್ಡನಗೌಡ ಪಾಟೀಲ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಶರಣೇಗೌಡ ಪೋಲಿಸಪಾಟೀಲ ವಹಿಸಲಿದ್ದಾರೆ, ಕನ್ನಡಾಂಬೆ ಭಾವಚಿತ್ರಕ್ಕೆ ಕಾಡಾ ನಿಗಮದ ಅಧ್ಯಕ್ಷ ಹಸನಸಾಬ ದೋಟಿಹಾಳ ಹಾಗೂ ಕಸಾಪ ತಾಲೂಕಾಧ್ಯಕ್ಷ ವೀರೇಶ ಬಂಗಾರಶೆಟ್ಟರ ಅವರು ಪುಷ್ಪಾರ್ಪನೆ ಮಾಡಲಿದ್ದು ಕಟ್ಟೋಣ ಕನ್ನಡ ಕಂಕಣ ಎಂಬ ಕೃತಿಯನ್ನು ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಬಿಡುಗಡೆಗೊಳಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ ಶರಣಪ್ಪ ವಕೀಲರು ಹಾಗೂ ಕೇಂದ್ರ ಕಸಾಪ ಪ್ರತಿನಿಧಿ ನಬಿಸಾಬ ಕುಷ್ಟಗಿ ಸೇರಿದಂತೆ ದೋಟಿಹಾಳ ಹಾಗೂ ಕೇಸೂರು ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು, ಕಸಾಪ ಆಜೀವ ಸದಸ್ಯರು, ಕನ್ನಡಾಭಿಮಾನಿಗಳು ಆಗಮಿಸಲಿದ್ದಾರೆ ಎಂದರು.
ಮಾಜಿ ಕಸಾಪ ಅಧ್ಯಕ್ಷ ಹನುಮಂತರಾವ ದೇಸಾಯಿ ಮಾತನಾಡಿ ಕಸಾಪ ವತಿಯಿಂದ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಹಕಾರ ನೀಡುವದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಸಾಪ ಹೋಬಳಿ ಘಟಕದ ಕಾರ್ಯದರ್ಶಿ ಶ್ರೀನಿವಾಸ ಕಂಟ್ಲಿ, ಬಸವರಾಜ ಕಡಿವಾಲ, ಮುಖಂಡರಾದ ಕೆವೈ ಕಂದಕೂರು, ಕಲ್ಲಯ್ಯಸ್ವಾಮಿ ಸರಗಣಾಚಾರಿ, ಪ್ರಭುದೇವ ಕಲ್ಯಾಣಮಠ, ಶರಣಪ್ಪ ಗೋತಗಿ, ಪರಶಿವಮೂರ್ತಿ ಮಾಟಲದಿನ್ನಿ, ಮಂಜುನಾಥ ಅಂಗಡಿ, ಪೂರ್ಣಿಮಾ ದೇವಾಂಗಮಠ, ಗಾಯಿತ್ರಿ ಕುದರಿಮೋತಿ ಸೇರಿದಂತೆ ಅನೇಕರು ಇದ್ದರು.