ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ಜೆಡಿಎಸ್ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್. ಮಂಜುನಾಥ್ ಹೆಸರು ಪ್ರಕಟ

ಹನೂರು: 2023 ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷವು ತನ್ನ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆಗೊಳಿಸಿದ್ದು, ಈ ಪೈಕಿ ಹನೂರು ವಿಧಾನಸಭಾ ಕ್ಷೇತ್ರದಿಂದ ಎಂ.ಆರ್. ಮಂಜುನಾಥ್ ಹೆಸರು ಕೂಡ ಪ್ರಕಟವಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ 44,495 ಮತಗಳನ್ನು ಗಳಿಸಿ ಕ್ಷೇತ್ರದ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದ ಮಂಜುನಾಥ್,ಚುನಾವಣೆಯಲ್ಲಿ ಪರಾಜಿತರಾದರು ಕೂಡ ಕ್ಷೇತ್ರದ ಜನತೆಯ ಒಡನಾಟವನ್ನು ಇಟ್ಟುಕೊಂಡು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಾ ಪಕ್ಷ ಸಂಘಟನೆಗೂ ಒತ್ತು ನೀಡಿದ್ದರು. ಮಂಜುನಾಥ್ ರವರ ಪಕ್ಷ ಸಂಘಟನೆ ಹಾಗೂ ಜನಪರ ಕಾರ್ಯಗಳನ್ನು ಮೆಚ್ಚಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿಯವರೇ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಂಜುನಾಥ್ ರವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡುತ್ತೇನೆ ಹಾಗೂ ಪಕ್ಷದಲ್ಲಿ ಉನ್ನತ ಸ್ಥಾನಮಾನವನ್ನು ನೀಡುತ್ತೇನೆ ಎನ್ನುವಷ್ಟರ ಮಟ್ಟಿಗೆ ವಿಶ್ವಾಸವನ್ನು ಗಳಿಸಿದ್ದರು.

ಈ ಬಾರಿಯೂ ಕೂಡ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ಜೊತೆಗೆ ಜೆಡಿಎಸ್ ಪಕ್ಷದ ಮೂಲಕ ಮಂಜುನಾಥ್ ವಿಧಾನಸಭೆಗೆ ಆಯ್ಕೆ ಆಗುತ್ತಾರೆ ಎಂಬ ಬಲವಾದ ಕೂಗು ಸಹ ಕೇಳಿ ಬರುತ್ತಿದೆ. ಇದನ್ನೆಲ್ಲ ಪರಿಗಣಿಸಿರುವ ವರಿಷ್ಠರು ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಂಜುನಾಥ್‍ರವರ ಹೆಸರನ್ನು ಆಯ್ಕೆ ಮಾಡಿದ್ದಾರೆ. ಆ ಮೂಲಕ ಇನ್ನೂ ಹೆಚ್ಚಿನ ಅತ್ಯಂತ ಹುರುಪಿನಿಂದ ಪಕ್ಷ ಸಂಘಟನೆ ಹಾಗೂ ಚುನಾವಣೆ ಗೆಲ್ಲುವ ದಿಸೆಯಲ್ಲಿ ಮಂಜುನಾಥ್ ಅವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಕಾರ್ಯಕರ್ತರುಗಳಿಗೆ ಮುಖಂಡರುಗಳಿಗೆ ಈ ಬೆಳವಣಿಗೆ ಸ್ಪೂರ್ತಿದಾಯಕವಾಗಿದೆ.

ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ