ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಹಾಗೂ ಬಿಜಾಸ್ಪುರ ಗ್ರಾಮಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಸ್ನೇಹಾಲ್ ಆರ್ ಅವರು ಮತದಾರರ ಪಟ್ಟಿ ಪರಿಷ್ಕರಣೆಯನ್ನು ಪರಿಶೀಲನೆ ಮಾಡಿದರು. ಚುನಾವಣೆ ಆಯೋಗದ ಆದೇಶದಂತೆ ಮತದಾರರ ಪಟ್ಟಿ ಶುದ್ಧೀಕರಿಸಿದ ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ? ಇಲ್ಲವೇ? ಎಂಬುವುದು ಮನೆ ಮನೆಗೆ ತೆರಳಿ ಚರ್ಚಿಸಿ ಮಾಹಿತಿ ಪಡೆದುಕೊಂಡರು.ಸುರಪುರ ತಾಲೂಕ ದಂಡಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ.ಅರ್ಜಿಗಳನ್ನು ಸ್ಥಳದಲ್ಲಿ ಪರಿಶೀಲಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಮತದಾರರ ಪಟ್ಟಿ ಪರಿಶೀಲಿಸಿದರು. ನಂತರ ವಣಿಕಿಹಾಳ, ಸತ್ಯಂಪೇಟೆ, ಮತ್ತು ಕೃಷ್ಣಾಪುರ, ಬಿಜಾಸ್ಪುರ ಗ್ರಾಮಗಳಿಗೆ ಭೇಟಿ ನೀಡಿ ಅರ್ಜಿದಾರರ ಮನೆಗಳಿಗೆ ಜಿಲ್ಲಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದಲ್ಲಿ ಇಲ್ಲವೇ ತಪ್ಪಾಗಿದ್ದಲ್ಲಿ ಹಾಗೂ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕಬಹುದಾಗಿದೆ. ಅದಕ್ಕೆಂದೇ ಚುಣಾವಣೆ ಆಯೋಗವು ನಮೂನೆ ೬,೭ ಮತ್ತು ೮ ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನವೆಂಬರ್ ೯ ರಿಂದ ಡಿಸೆಂಬರ್ ೮ ರ ವರೆಗೆ ಅವಕಾಶ ಕಲ್ಪಿಸಿತು. ಈ ವೇಳೆ ಎಲ್ಲಾ ಬೂತ್ ಪಟ್ಟದ ಅಧಿಕಾರಿಗಳು ಬಿಎಲ್ಓ ಮತ್ತು ಮೇಲ್ವಿಚಾರಕರು ಮನ-ಮನೆಗೆ
ತೆರಳಿ ಮತದಾರರ ಪಟ್ಟಿ ಶುದ್ಧೀಕರಿಸುವ ಕಾರ್ಯ ಮಾಡಿ ಎಂದರು.
ಅರ್ಜಿದಾರರ ಮನೆಗಳಿಗೆ ಹೋಗಿ ಪರಿಶೀಲಿಸಿದಾಗ ಎಲ್ಲಾವೂ ಸರಿಯಾಗಿದ್ದು. ನಮೂನೆಗಳಿಗೆ ಮನೆಯವರು ಹೆಸರು ಮತ್ತು ವಿಳಾಸ ಸಿಹಿ ಪರಿಶೀಲನೆ ಜೊತೆಗೆ ಎರಡು ಕಡೆ ಹೆಸರಿದಲ್ಲಿ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜೊತೆಗೆ ಮಾತನಾಡಿ ಒಂದು ಕಡೆ ಹೆಸರನ್ನು ತೆಗೆದು ಹಾಕಲಾಗುವುದು. ಕೆಲವು ನಮೂನೆಗಳಲ್ಲಿ ಅಧಿಕಾರಿಗಳಿಗೆ ಸಮಯ ಮತ್ತು ದಿನಾಂಕವನ್ನು ಸರಿಯಾಗಿ ನಮೂದಿಸಲು ಆದೇಶಿಸಲಾಗಿದೆ ಎಂದು ಹೇಳಿದರು.
ಸ್ಯತಂಪೇಠ ಗ್ರಾಮದ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿಗಳು ದಿಢೀರನೆ ಭೇಟಿ ನೀಡಿ ಗ್ರಾಹಕರಿಂದ ಯಾವುದೇ ರೀತಿಯಲ್ಲಿ ಹಣ ಪಡದಿರುವ ಬಗ್ಗೆ ದೂರ ಬಂದರೆ.ಅತಂಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಗ್ರಾಹಕರಿಗೆ ವಿತರಣೆ ಮಾಡುವ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಹೇಳಿದರು. ಸ್ಯತಂಪೇಠ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಹೋದಾಗ ಮನೆಯಲ್ಲಿ ಇದ್ದ ಶಾಲಾ ಮಕ್ಕಳಿಗೆ ತಮ್ಮ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಹೋದರು. ಶಿಕ್ಷಣದಿಂದ ಮಕ್ಕಳು ಹೊರಗೆ ಉಳಿಯದಂತೆ ಕ್ರಮ ವಹಿಸಲು ಶಾಲಾ ಶಿಕ್ಷಕರು ಮನೆ- ಮನೆಗೆ ಭೇಟಿ ನೀಡಬೇಕು ಎಂದು ಮುಖ್ಯ ಗುರುಗಳಿಗೆ ಕಟ್ಟು ನಿಟ್ಟಾಗಿ ಸೂಚಿಸಿದರು.
ಶಾಲಾ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ಮಾಡಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಎಲ್ಲಾ ಕೋಣೆಗಳು ಸ್ವಚ್ಛತೆಗೆ ಆದ್ಯತೆ ನೀಡಿ ಹಾಗೂ ಶೌಚಾಲಯ, ಕುಡಿಯುವ ನೀರು ಅಗತ್ಯ ಮೂಲಭೂತ ಸೌಕರ್ಯಗಳು ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಮಕ್ಕಳೊಂದಿಗೆ ಸಮಾಲೋಚಿಸಿ ಪರೀಕ್ಷೆಗಳು
ಬರುತ್ತಿದೆ ಅಭ್ಯಾಸ ಕಡೆ ಹೆಚ್ಚು ಗಮನ ಹರಿಸಬೇಕು. ಬಿಸಿ ಊಟದ ಹಾಗೂ ಅಡುಗೆ ದಾಸ್ತಾನು ಕೊಠಡಿಗಳನ್ನು ವಿಕ್ಷಿಸಿದವರು. ಸುರಪುರ ದಂಡಾಧಿಕಾರಿ ಸುಬ್ಬಣ್ಣ ಜಮಖಂಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಡಿ ಡಿ ಪ್ರಭುದೊರೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಎಸ್, ತೋಟಗಾರಿಕೆ ಇಲಾಖೆ ಅಧಿಕಾರಿ ಸಂತೋಷ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ