ಕೊಪ್ಪಳ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನಕ್ಕೆ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನಾನಾ ಬೇಡಿಕೆಗಾಗಿ ಹಕ್ಕೊತ್ತಾಯ ಮಂಡಿಸಲು ಡಿ.13ಕ್ಕೆ ಬೆಳಗಾವಿ ಚಲೋ ನಡೆಸಲಾಗುವುದು ಎಂದು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ಕನಕಗಿರಿ ತಾಲೂಕು ಅಧ್ಯಕ್ಷರಾದ ಯಮನೂರ ಬಸರಿಹಾಳ ತಿಳಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಅತಿಥಿ ಶಿಕ್ಷಕರ ವೇತನ ಹೆಚ್ಚಳ ಮಾಡಬೇಕು ಹಾಗೂ ಈಗಿರುವ ಅತಿಥಿ ಶಿಕ್ಷಕರನ್ನು ಮುಂದುವರಿಸಬೇಕು, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಸೇವಾ ಅನುಭವಕ್ಕೆ ಆದ್ಯತೆ ನೀಡಬೇಕು, ಅತಿಥಿ ಶಿಕ್ಷಕರ ಪ್ರಮಾಣ ಪತ್ರ ಪೂರೈಕೆಯಾಗಬೇಕು, ಅತಿಥಿ ಶಿಕ್ಷಕರ ಮಾತಿಕ ವೇತನ 20 ಸಾವಿರಕ್ಕೆ ಹೆಚ್ಚಿಸಬೇಕು ಎಂಬುದು ಸೇರಿದಂತೆ ನಾನಾ ಬೇಡಿಕೆಗಳ ಹಕ್ಕೊತ್ತಾಯ ಮಂಡಿಸಲು ರಾಜ್ಯದ ಎಲ್ಲೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಅತಿಥಿ ಶಿಕ್ಷಕರ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ವರದಿ-ಹನುಮಂತಪ್ಪ ನಾಯಕ
