
ರಾಯಚೂರು/ಸಿಂಧನೂರು: ಆದಿವಾಸಿ ಪರಿಸರ ಹೋರಾಟಗಾರ್ತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿಗೌಡ ಅವರ ನಿಧನಕ್ಕೆ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತ,ವನಸಿರಿ ಪೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ವೃಕ್ಷ ಮಾತೆ ಎಂದು ಹೆಸರು ವಾಸಿಯಾಗಿದ್ದ ತುಳಸಿಗೌಡ ಅವರು ಒಂದು ಲಕ್ಷಕ್ಕೂ ಅಧಿಕ ಸಸಿಗಳನ್ನು ನೆಟ್ಟು ಬೆಳಸಿದ್ದಾರೆ.ಅವರು ಪರಿಸರ ಸೇವೆಗೆ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.ಅವರ ನಿಧನಕ್ಕೆ ರಾಜ್ಯದ ಪರಿಸರ ಪ್ರೇಮಿಗಳು, ಕುಟುಂಬಸ್ಥರು, ಬಂಧುಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ದೇವರು ನೀಡಲಿ. ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸಿದರು.
