ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದುರುದ್ದೇಶದ ರಾಜಕೀಯ

ಚಿತ್ತಾಪುರ; ಗುತ್ತಿಗೆದಾರ ಸಚಿನ್ ಪಂಚಾಳ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ರೀತಿಯ ಸಂಬಂಧವಿರದ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಎಳೆದುತರುವ ಮೂಲಕ ಬಿಜೆಪಿ ಪಕ್ಷ ದುರುದ್ದೇಶದ ರಾಜಕೀಯ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಮುಕ್ತಾರ ಪಟೇಲ್, ಜಿಪಂ ಮಾಜಿ ಸದಸ್ಯ ಶಿವರುದ್ರ ಭೀಣಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಖರ್ಗೆ ಕುಟುಂಬಕ್ಕೆ ಕಳಂಕ ಹಚ್ಚುವ, ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಹುನ್ನಾರ ಬಿಜೆಪಿ ಮಾಡುತ್ತಿದೆ. ಡೆತ್ ನೋಟ್ ಹೆಸರಲ್ಲಿ ದುರುದ್ದೇಶದ ರಾಜಕಾರಣಕ್ಕೆ ಪ್ರಕರಣ ಬಳಸಿಕೊಂಡು ಸಚಿವರ ಹೆಸರು ಅನಗತ್ಯವಾಗಿ ಪುಸ್ತಾಪ ಮಾಡಿದ್ದು ನಾಚಿಕೆಗೇಡಿನ ಸಂಗತಿ. ಕ್ಷುಲ್ಲಕ ರಾಜಕೀಯ ಬಿಜೆಪಿಯ ಜಾಯಮಾನವಾಗಿದೆ ಎಂದು ಆಪಾದಿಸಿದರು.
ಗುತ್ತಿಗೆದಾರ ಸಚಿನ್‌ ಅವರು ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು ಏನೇ ಸಮಸ್ಯೆ ಇದ್ದರೂ ಕಾನೂನಿನ ಮೊರೆ ಹೋಗಬೇಕಿತ್ತು. ಅವರು ಸಾವಿಗೆ ಶರಣಾಗುವ ಮುಂಚೆ ಏಳು ಪುಟಗಳ ಮರಣಪತ್ರ ಬರೆದಿಟ್ಟಿರುವ ಕುರಿತು ಸತ್ಯಾಸತ್ಯ ಹೊರಬರಲು ತನಿಖೆಗೊಳಪಡಿಸಬೇಕು ಸಾಯಬೇಕು ಎಂದು ನಿರ್ಣಯಿಸಿದ ವ್ಯಕ್ತಿಯ ಮಾನಸಿಕ ಸ್ಥಿತಿಯು ಸಮತೋಲನ ಕಳೆದುಕೊಳ್ಳುವ ಸಂಭವವೇ ಹೆಚ್ಚು. ಏಳು ಪುಟಗಳ ಮರಣಪತ್ರ ಬರೆಯುವಷ್ಟು ಸಹನೆ, ತಾಳ್ಮೆ ಇರುವಾಗ ಮನಸ್ಸು ಬದಲಾಗುವ ಸಾಧ್ಯತೆ ಇರುತ್ತದೆ. ಸಚಿನ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿಯ ಷಡ್ಯಂತರ ಇದೆಯೆ ಎಂದು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮುಖಂಡರ ಕೊಲೆಗೆ ಸಂಚು ಮಾಡಲಾಗಿದೆ ಎಂದು ಗುಲ್ಲೆಬ್ಬಿಸಿದ ಬಿಜೆಪಿಯವರ ವರ್ತನೆ ಅನುಮಾನಕ್ಕೆಡೆ ಮಾಡಿದೆ. ಆ ರೀತಿಯ ಸಂಚು ತಿಳಿದ ಮೇಲೆ ಸಚಿನ್ ಅವರು ಬಿಜೆಪಿ ಮುಖಂಡರಿಗೆ, ಜನಪ್ರತಿನಿಧಿಗಳಿಗೆ ಮೊದಲೆ ತಿಳಿಸಬೇಕಿತ್ತು. ವಿಷಯ ಗೌಪ್ಯವಾಗಿಟ್ಟು ಡೆತ್ ನೋಟಿನಲ್ಲಿ ಆ ವಿಷಯ ಬರೆದಿಟ್ಟಿದ್ದು ಹಾಗೂ ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಂಡಿದ್ದು ಅನೇಕ ಅನುಮಾನ ಹುಟ್ಟು ಹಾಕಿದೆ. ಸಚಿವರ ವಿರುದ್ಧ ಇಲ್ಲಸಲ್ಲದ ಅಪವಾದ, ಆರೋಪ ಮಾಡುವುದು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಗುತ್ತಿಗೆದಾರನಾಗಿದ್ದ ಸಚಿನ್ ಅವರು ಕಾಮಗಾರಿ ಗುತ್ತಿಗೆ ಪಡೆಯಲು ಹಣಕಾಸಿನ ಲೇವಾದೇವಿ ಮಾಡುವುದು ಸಹಜ. ತನ್ನ ಆರ್ಥಿಕ ಶಕ್ತಿಗೆ ಮೀರಿ ಸಾಲ ಅಥವಾ ಕೈಗಡವಾಗಿ ಪಡೆದ ಹಣ ಹಿಂತಿರುಗಿಸಲು ಸಾಧ್ಯವಾಗದ ಪರಿಸ್ಥಿತಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಆತ್ಮಹತ್ಯೆಗೆ ಮುಂಚೆ ತನಗೆ ಸಹಾಯ ಮಾಡಿದವರನ್ನು ತನ್ನ ಸಾವಿಗೆ ಹೊಣೆಗಾರರಾಗಿ ಮಾಡುವ ಉದ್ದೇಶದೊಂದಿಗೆ ಡೆತ್ ನೋಟ್ ಬರೆದಿರಬಹುದು. ಸಚಿನ್ ಅವರು ತನ್ನ ಆತ್ಮಹತ್ಯೆ ಸಾವಿನೊಂದಿಗೆ ಕಾಂಗ್ರೆಸ್, ಬಿಜೆಪಿ ಪಕ್ಷದ ಹೆಸರು ಉಲ್ಲೇಖಿಸಿ ಬರೆದು ಆತ್ಮಹತ್ಯೆಯಲ್ಲಿ ರಾಜಕೀಯ ಬೆರೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಚಿನ್ ಆತ್ಮಹತ್ಯೆಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಯಾವುದೇ ಸಂಬಂಧವೇ ಇಲ್ಲ. ಸಂಬಂಧ ಕಲ್ಪಿಸಲು ಯತ್ನಿಸುತ್ತಿರುವ ಬಿಜೆಪಿಯವರ ಬಣ್ಣ ಬಯಲಾಗುವುದರಲ್ಲಿ ಯಾವುದೇ ಅನುಮಾನವೇ ಇಲ್ಲ. ಬಿಜೆಪಿ ಅವರಿಗೆ ಸಾವಿನ ಮೇಲೆ ರಾಜಕೀಯ ಮಾಡುವುದೇ ಅವರ ಮೂಲ ಉದ್ದೇಶವಾಗಿದೆ ಎಂದರು.
ಡೆತ್‌ ನೋಟಿನಲ್ಲಿರುವ ರಾಜು ಕಪನೂರ ಅವರೊಬ್ಬರೆ ಪ್ರಿಯಾಂಕ್ ಖರ್ಗೆ ಅವರ ಆಪ್ತರಲ್ಲ, ಪಕ್ಷದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅವರಿಗೆ ಆಪ್ತರು, ಅಭಿಮಾನಿಗಳಿದ್ದಾರೆ. ಅಂತಹವರ ವೈಯಕ್ತಿಕ ಬದುಕು ಮತ್ತು ಚಟುವಟಿಕೆಗಳಿಗೆ ಸಚಿವರು ಹೊಣೆಗಾರರಾಗಲು ಸಾಧ್ಯವೇ ಇಲ್ಲ. ಇದನ್ನು ಅರಿವಿದ್ದರೂ ಅರಿಯದಂತೆ ಆರೋಪ ಮಾಡುತ್ತಿರುವ ಬಿಜೆಪಿಯವರ ಮನಸ್ಸಿನಲ್ಲಿ ಸಚಿವರ ಬಗ್ಗೆ ದ್ವೇಷ, ಅಸೂಹೆ, ದುರುದ್ದೇಶವಿದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಸಚಿವರ ರಾಜಕೀಯ ಬೆಳವಣಿಗೆ ಸಹಿಸಿಕೊಳ್ಳಲಾಗದೆ ಸಚಿವರ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ತಾಪಂ ಮಾಜಿ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ್, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಯುವ ಅಧ್ಯಕ್ಷ ಸಂಜು ಬುಳಕರ್, ನಾಗಯ್ಯ ಗುತ್ತೇದಾರ, ಶರಣಪ್ಪ ನಾಟೀಕಾರ್, ಹಣಮಂತ ಸಂಕನೂರ, ಓಂಕಾರ್ ರೇಶ್ಮಿ, ರವೀಂದ್ರ ರೆಡ್ಡಿ ಅನ್ನಪುರ ಸೇರಿದಂತೆ ಇತರರು ಇದ್ದರು.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!