ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ನಗರದಲ್ಲಿ ಶಿವಾಜಿ ಸರ್ಕಲ್ ಬಳಿ ಪಟ್ಟಣದ ಪ್ರಮುಖ ರಸ್ತೆಗಳಿಗೆ ‘ಅಲಂಕೃತ ವಿದ್ಯುತ್ ಬೀದಿ ದೀಪ ಅಳವಡಿಕೆ’ ಕಾಮಗಾರಿಗೆ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಭೂಮಿ ಪೂಜೆ ನೆರವೇರಿಸಿದರು.
ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಮುಖ ರಸ್ತೆಗಳ ಎರಡು ಬದಿಗಳಲ್ಲಿ ಸುಮಾರು 4 ಕಿ ಮೀ ವ್ಯಾಪ್ತಿಯಲ್ಲಿ ಜಿಗ್ ಜ್ಯಾಗ್ ಮಾದರಿಯಲ್ಲಿ ವಿದ್ಯುತ್ ಬೀದಿ ದೀಪಗಳನ್ನು ಅಳವಡಿಸುವ ಕಾಮಗಾರಿ ಇದಾಗಿದೆ



















