ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು ಕಾರ್ಮಿಕರಿಬ್ಬರು ಸ್ಥಳದಲ್ಲೇ ಮೃತ

ಚಾಮರಾಜನಗರ: ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು ಕಾರ್ಮಿಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಇಂದು ಸಂಭವಿಸಿದೆ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು,ಆಸ್ಪತ್ರೆಗೆ ದಾಖಲು ಮಾಡಲಾಯಿತು

ಕುಮಾರ್ ಮತ್ತು ಶಿವರಾಜು ಮೃತ ದುರ್ದೈವಿಗಳು. ಸಿದ್ದರಾಜು ಸ್ಥಿತಿ ಗಂಭೀರವಾಗಿದೆ. ಕಾಗಲವಾಡಿ‌ ಮೊಳೆ ಗ್ರಾಮದ ಇವರೆಲ್ಲರೂ ಕ್ಲಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಕ್ವಾರೆಗೆ ಕುಳಿ ಹೊಡೆಯಬೇಕಾದರೆ ಮೇಲಿನಿಂದ ಬಂಡೆ ಬಿದ್ದಿದ್ದು, ಇದರಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ.

ತಮಿಳುನಾಡು ಮೂಲದ ಭಾಸ್ಕರ್ ಎಂಬುವವರಿಗೆ ಈ ಕಲ್ಲು ಕ್ವಾರೆ ಸೇರಿದೆ. ಬಂಡೆ ಕುಸಿದು ಇಬ್ಬರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಸಾಗಿಸಿದ್ದಾರೆ.

ಗುಂಡ್ಲುಪೇಟೆಯ ಮಡಹಳ್ಳಿಯ ಗುಮ್ಮಕಲ್ಲುಗುಡ್ಡದ ಕಲ್ಲು ಕ್ವಾರಿಯಲ್ಲಿ ಕಳೆದ ಮಾರ್ಚ್​ 4ರಂದು ಬಂಡೆ ಕುಸಿದು ಬಿಹಾರ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಚಾಮರಾಜನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ