ಬೀದರ್: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ಜನವರಿ 23ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಆಸಕ್ತರು ಜ. 22ರಂದು ಸಂಜೆ 5ಕ್ಕೆ ಬೀದರ್ ರೈಲು ನಿಲ್ದಾಣಕ್ಕೆ ಬರಬೇಕು ಎಂದು ದ.ಸಂ.ಸ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ರಮೇಶ ಮಂದಕನಳ್ಳಿ ತಿಳಿಸಿದ್ದಾರೆ.
ವರದಿ : ರೋಹನ್ ವಾಘಮಾರೆ
