ಬೀದರ್ ಜಿಲ್ಲೆ ಔರಾದ್ ತಾಲೂಕು ಕೌಠಾ ಬಿ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಶಿವಕುಮಾರ್ ಶಿಂಧೆ ಇವರು ನೆರವೇರಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಇಂದುಮತಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ಬಸಮ್ಮ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಕ. ರ. ವೇ ಕಾರ್ಯಕರ್ತರು ಜಗನ್ನಾಥ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮದ ಗುರು ಹಿರಿಯರು, ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ವರದಿ ಸಂಗಮೇಶ್ ಚಿದ್ರೆ
