ಬೀದರ್/ ಚಿಟಗುಪ್ಪ : ಸರ್ವ ರೀತಿಯಲ್ಲೂ ದೇಶ ಉನ್ನತ ಹೊಂದಿದರೆ, ಭವ್ಯ ಭಾರತ ದೇಶವು ವಿಶ್ವ ಮಟ್ಟದಲ್ಲಿ ಸೂಪರ್ ಪವರ್ ರಾಷ್ಟ್ರವಾಗಿ ನಿಲ್ಲುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ ಹೇಳಿದರು.
ನಗರದ ಸಂತ ಮಡಿವಾಳೇಶ್ವರ ದೇವಸ್ಥಾನದ ಸಮುದಾಯ ಭವನ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 2.50 ಲಕ್ಷ ರೂ. ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು ಭಾರತ ದೇಶ ಈಗ ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಹೊಂದುತ್ತಿದೆ, ಈ ಅಭಿವೃದ್ಧಿ ವೇಗ ಇನ್ನಷ್ಟು ಹೆಚ್ಚಾಗಲಿ ಎಂದು ಗ್ರಾಮಾಭಿವೃದ್ಧಿ ಯೋಜನೆ ನಿರಂತರವಾಗಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹತ್ತು ಹಲವು ಅಭಿವೃದ್ಧಿ ಪಥ ಯೋಜನೆಗಳು ಹಾಕಿಕೊಂಡು ಸರ್ವರ ವಿಕಾಸಕ್ಕಾಗಿ ಶ್ರಮಿಸಲಾಗುತ್ತಿದೆ. ವಿಶೇಷವಾಗಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ನೀಡಿ, ಜನಸಾಮಾನ್ಯರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.
ಜನಜಾಗೃತಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ ಅನುದಾನ ಉಪಯೋಗಿಸಿಕೊಂಡು ಸಮುದಾಯ ಭವನ ಅಭಿವೃದ್ಧಿ ಹೊಂದಲಿ ಎಂದರು.
ತಾಲೂಕು ಯೋಜನಾಧಿಕಾರಿ ಬಸವರಾಜ ರವರು ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾ ಸದಸ್ಯರಾದ ಶಾಮ ಭೂತಾಳೆ, ಸಂಗಮೇಶ ಎನ್ ಜವಾದಿ ಸೇರಿದಂತೆ ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
