ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೆದುಳು ಜ್ವರ ಕುರಿತು ವೈದ್ಯರಿಗೆ ಕಾರ್ಯಾಗಾರ

ಮೆದುಳು ಜ್ವರ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಅತ್ಯಗತ್ಯ : ಡಾ.ನಟರಾಜ್

ಶಿವಮೊಗ್ಗ: ಮೆದುಳು ಜ್ವರಕ್ಕೆ ಹೆಚ್ಚಾಗಿ ಮಕ್ಕಳು ತುತ್ತಾಗುತ್ತಾರೆ. ಈ ರೋಗ ತಗುಲಿದ ಶೇ.30 ರಿಂದ 50 ರಷ್ಟು ಮಕ್ಕಳು ಮರಣ ಹೊಂದುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಡಿಹೆಚ್‌ಓ ಡಾ.ನಟರಾಜ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯತ್ರಂಣ ಕಾರ್ಯಕ್ರಮ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಂಭಾಗಣದಲ್ಲಿ ವೈದ್ಯರುಗಳಿಗೆ ಏರ್ಪಡಿಸಲಾಗಿದ್ದ ಮೆದುಳು ಜ್ವರ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮೆದುಳು ಜ್ವರು ವೈರಾಣುವಿನಿಂದ ಉಂಟಾಗುವ ರೋಗ. ಈ ರೋಗವು ಸೋಂಕಿರುವ ಹಂದಿಗಳು, ಹಂಸ ಪಕ್ಷಿಗಳಿಂದ ಕ್ಯುಲೆಕ್ಸ್ ಜಾತಿಯ ಸೊಳ್ಳೆಗಳ ಮೂಲಕ ಹರಡುತ್ತದೆ. ಮಾನವನಿಗೆ ಇದು ಆಕಸ್ಮಿಕವಾಗಿ ತಗಲುತ್ತದೆ. ಈ ರೋಗಕ್ಕೆ ಹೆಚ್ಚಾಗಿ ಮಕ್ಕಳು ತುತ್ತಾಗುತ್ತಾರೆ. ಮುನ್ನೆಚ್ಚರಿಕೆ ಕ್ರಮಗಳಿಂದ ಈ ರೋಗವನ್ನು ನಿಯಂತ್ರಿಸಬಹುದು. ಆದ್ದರಿಂದ ಎಲ್ಲರೂ ಮುನ್ನಚ್ಚರಿಕೆ ವಹಿಸಬೇಕೆಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಗುಡದಪ್ಪ ಕಸಬಿ ಮಾತನಾಡಿ, ನಮ್ಮ ದೇಶದಲ್ಲಿ ಈ ಮೆದಳು ಜ್ವರ ಸಂಕ್ರಾಮಿಕ ರೋಗವು 2005 ರಲ್ಲಿ ಉತ್ತರಪ್ರದೇಶದಲ್ಲಿ ಮೊದಲ ಬಾರಿಗೆ ಕಂಡು ಬಂದಿತು. ಪ್ರತಿ ವರ್ಷ ವಿಶ್ವದಲ್ಲಿ ಐವತ್ತು ಸಾವಿರ ಮೆದುಳು ಜ್ವರದ ಪ್ರಕರಣಗಳು ಕಂಡು ಬರುತ್ತವೆ. ಅದರಲ್ಲಿ ಹತ್ತು ಸಾವಿರ ಸಾವು ಸಂಭವಿಸುತ್ತದೆ. ಹದಿನೈದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಶೇ.85 ರಷ್ಟು ಮೆದುಳು ಜ್ವರದ ಪ್ರಕರಣಗಳು ಕಂಡು ಬರುತ್ತಿವೆ.
ಜ್ವರ, ತಲೆನೋವು, ಕತ್ತಿನ ಬಿಗಿತ, ತಲೆ ಸುತ್ತುವಿಕೆ, ಮೈ ನಡುಕ, ಎಚ್ಚರ ತಪ್ಪುವುದು ಮೆದುಳು ಜ್ವರದ ಲಕ್ಷಣಗಳಾಗಿದ್ದು, ಖಾಯಿಲೆಯು ಉಲ್ಬಣಗೊಂಡಾಗ ಮೆದುಳು ಊತಗೊಂಡು ಸಾವು ಸಂಭವಿಸಬಹುದು. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳಾದ ಮಕ್ಕಳಿಗೆ ಮೆದುಳು ಜ್ವರ ವಿರುದ್ದದ ಲಸಿಕೆ ಕೊಡಿಸುವುದು. ಹಂದಿಗಳನ್ನು ಜನರ ವಾಸಸ್ಥಳದಿಂದ ಕನಷ್ಟ ಪಕ್ಷ 3 ಕಿ.ಮೀ ದೂರಕ್ಕೆ ಸ್ಥಳಾಂತರಿಸುವುದು. ಸಂಜೆ ವೇಳೆಯಲ್ಲಿ ಮೈ ತುಂಬಾ ಬಟ್ಟೆ ಧರಿಸಿ ಓಡಾಡುವುದು, ಹಂದಿ ಗೂಡುಗಳಿಗೆ ಸೊಳ್ಳೆ ನಿರೋಧಕ ಜಾಲರಿ ಅಳವಡಿಸುವುದು ಮತ್ತು ಕೀಟ ನಾಶಕ ಸಿಂಪಡಿಸುವುದು, ರೋಗ ಲಕ್ಷಣ ಕಂಡು ಬಂದ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡಬೇಕೆಂದರು.
ವೈದ್ಯರುಗಳಾದ ಡಾ. ಪೃಥ್ವಿ ಮಾತನಾಡಿ, ಡಾ. ಶಶಿಕಾಂತ್, ಡಾ. ಪಿ.ಕೆ. ಪೈರವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮೆದುಳು ಜ್ವರದ ಲಕ್ಷಣಗಳು, ರೋಗ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮ ಹಾಗೂ ಚಿಕಿತ್ಸೆ ಕುರಿತು ತಿಳಿಸಿದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ