ಕೊಟ್ಟೂರು: ಗ್ರಾಮ ಲೆಕ್ಕಾಧಿಕಾರಿಗಳ ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳು ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ರಾಜ್ಯ ವ್ಯಾಪಿ 2ನೇ ಹಂತದ ಮುಷ್ಕರ
ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಗಳು:
- ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5 ಲಕ್ಷ ಅಮೃತ ಖಾತೆದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ಪೌತಿ ಖಾತೆ ದಾಖಲಿಸುವಂತೆ ಈ ಪೌತಿ ಖಾತೆ ಆಂದೋಲನ ಕೈಬಿಡವಂತೆ ಕೋರಿ
2.ಚಿಕ್ಕಮಗಳೂರು ಜಿಲ್ಲೆಯಲ್ಲಿ 30 ಗ್ರಾಮಾ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿಯನ್ನು ತಡೆದು ನೈಸರ್ಗಿಕ ನ್ಯಾಯ ತತ್ವಗಳನ್ನು ಹಾಗೂ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಹೊರಡಿಸಿರುವ ದಂಡನಾ ಆದೇಶವನ್ನು ಈ ಕೂಡಲೇ ಹಿಂಪಡೆಯುವುದು
3.ಅಂತರ್ ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್.ಆರ್ ನಿಯಮ 16 ಎ ರ ಉಪಕಂಡ (2) ನ್ನು ಮರುಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿಯನ್ನು ರಚಿಸುವ ಬಗ್ಗೆ
4.ಸೇವಾ ವಿಷಯಗಳು ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ
5.ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ
- ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವ ಬಗ್ಗೆ
- ಕಂದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಲ್ಲಾ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡೆ ಮಾಡುವ ಬಗ್ಗೆ
- ಕ್ಷೇತ್ರ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 50 ಲಕ್ಷ ರೂಗಳ ಪರಿಹಾರ ಮಂಜೂರು ಮಾಡುವ ಬಗ್ಗೆ
- ಮಾತೃ ಇಲಾಖೆಯ ಎಲ್ಲಾ ಕೆಲಸಗಳೊಂದಿಗೆ ಸರ್ಕಾರದ ಆದೇಶದಂತೆ ಇತರೆ ಇಲಾಖೆಗಳ ಹಲವಾರು ಕೆಲಸಗಳನ್ನು ನಿರ್ವಹಿಸುವ ಹಾಗೂ ಚುನಾವಣೆ ಅತಿವೃಷ್ಟಿ ಅನಾವೃಷ್ಟಿ ಇನ್ನಿತರ ಗುರುತಾರವಾದ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ದಿನನಿತ್ಯ ಸಾರ್ವಜನಿಕ ವಲಯದಲ್ಲಿ ನೂರಾರು ಸೇವೆಗಳನ್ನು ನೀಡುವಾಗ ಮಾರಣಾಂತಿಕ ದೈಹಿಕ ಹಲ್ಲೆ ಕೊಲೆ ಪ್ರಕರಣಗಳು ಈಗಾಗಲೇ ನಿರಂತರವಾಗಿ ನಡೆಯುತ್ತಿತ್ತು ಅರಣ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆಯಲ್ಲಿರುವಂತೆ 3000/- ಗಳನ್ನು ಆಪತ್ತಿನ ಭತ್ತೆ (ರಿಸ್ಕ್ ಅಲೋಯನ್ಸ್ )ನೀಡುವ ಬಗ್ಗೆ
- ಪೋಲಿಸ್ ಇಲಾಖೆಯಲ್ಲಿರುವಂತೆ ನೂರಾರು ಕೆಲಸಗಳನ್ನು ನಿರ್ವಹಿಸುವ ಕಂದಾಯ ಇಲಾಖೆಯ ಗ್ರಾಮ ಸಹಾಯಕರನೊಳಗೊಂಡಂತೆ ಎಲ್ಲಾ ನೌಕರರಿಗೆ ಒಂದು ತಿಂಗಳ ವೇತನವನ್ನು ಹೆಚ್ಚುವರಿ ಮಾಡಿ ಆದೇಶಿಸುವ ಬಗ್ಗೆ
11.ಪ್ರಯಾಣ ಭತ್ಯೆ ದರವನ್ನು 500 ಗಳಿಂದ 5000 ರೂ. ಗಳಿಗೆ ಹೆಚ್ಚುವರಿ ಮಾಡುವ ಬಗ್ಗೆ
- ಆಯುಕ್ತ ವಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸುವ ಬಗ್ಗೆ
- ಮನೆ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯನ್ನು ಮಾತ್ರ ನೀಡುವ ಜವಾಬ್ದಾರಿ ನಿರ್ವಹಿಸುವಂತೆ ಆದೇಶಿಸುವ ಬಗ್ಗೆ
- ಕ್ಷೇತ್ರ ಮಟ್ಟದ ಗ್ರಾಹಗಳನ್ನು ಕಚೇರಿಗಳಿಗೆ ನಿಯೋಜಿಸಿಕೊಂಡಿರುವ ಪ್ರಕರಣಗಳಲ್ಲಿ ಅವರುಗಳು ಮೂಲ ಹುದ್ದೆಗಳಿಗೆ ಬಿಡುಗಡೆಗೊಳಿಸುವ ಸರ್ಕಾರ ಸುತ್ತೋಲೆ ಹೊರಡಿಸಿದ್ದು ಸುತ್ತೋಲೆ ನಂತರವೂ ಸಹ ಕ್ಷೇತ್ರ ಮಟ್ಟದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕಚೇರಿ ನಿಯೋಜನೆಯಿಂದ ಬಿಡುಗಡೆಗೊಳಿಸದೆ ಇರುವ ಪ್ರಕರಣಗಳಲ್ಲಿ ಸಂಬಂಧಿಸಿದವರ ವಿರುದ್ಧ ಸರ್ಕಾರದ ಸುತ್ತೋಲೆಯಂತೆ ಕ್ರಮ ಜರುಗಿಸುವ ಬಗ್ಗೆ
- ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಂತೆ ಹಾಗೂ ಕಚೇರಿ ಅವಧಿಯನ್ನು ಹೊರತುಪಡಿಸಿ ಸಭೆ ಒರಿಚುವಲ್ ಸಭೆಗಳನ್ನು ನಡೆಸಿದಂತೆ ಸರ್ಕಾರವು ಸುತ್ತೋಲೆಯನ್ನು ಹೊರಡಿಸಿದ ನಂತರವೂ ಕೂಡ ಕೆಲವು ಜಿಲ್ಲೆಗಳಲ್ಲಿ ಸರ್ಕಾರದ ಆದೇಶಗಳನ್ನು ಉಲ್ಲಂಘಿಸುತ್ತಿರುವವರ ಬಗ್ಗೆ ಶಿಸ್ತು ಕ್ರಮ ಜರುಗಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ
16.ಸುಮಾರು 50 ವರ್ಷಗಳ ಹಿಂದಿನ ಕಾಲದ ಕಛೇರಿಯ ಸಿಬ್ಬಂದಿ ಶಿರಸ್ತೆದಾರಗಳ ಹುದ್ದೆಗಳನ್ನು ಹಾಗೂ ಕ್ಷೇತ್ರ ಮಟ್ಟದಲ್ಲಿನ ಗ್ರಾಮ ಆಡಳಿತ ಅಧಿಕಾರಿಗಳ ವೃತ್ತಗಳನ್ನು /ಹೋಬಳಿ ಗಳನ್ನು ಜನಸಂಖ್ಯೆಗೆ ಅನುಗುಣವಾಗಿ ಪರಿಷ್ಕರಿಸಿ ಪುನರ್ ವಿಂಗಡಣೆ ಮಾಡಿ ಹೆಚ್ಚುವರಿ ಹುದ್ದೆಗಳನ್ನು ಸೂಚಿಸುವ ಬಗ್ಗೆ.
- ವಂಶವೃಕ್ಷ /ಜಾತಿ ಪ್ರಮಾಣ ಪತ್ರ ಇತರೆ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಎಫ್.ಐ.ಆರ್ ದಾಖಲಿಸುತ್ತಿರುವುದನ್ನು ನಿಲ್ಲಿಸಿ ತಪ್ಪು ಮಾಹಿತಿ ನೀಡುವ ಅರ್ಜಿದಾರರನ್ನೇ ನೇರ ಹೊಣೆಗಾರರನ್ನಾಗಿಮಾಡಿ ಪ್ರಕರಣ ದಾಖಲಿಸುವ ಬಗ್ಗೆ ಇಲಾಖೆಯ ಮುಖ್ಯಸ್ಥರಿಗೆ ಸೂಕ್ತ ಆದೇಶ ನೀಡುವ ಬಗ್ಗೆ.
- ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ/ ತೋಟಗಾರಿಗೆ ಇಲಾಖೆಗೆ ನಿರ್ವಹಿಸುವಂತೆ ಆದೇಶಿಸುವ ಬಗ್ಗೆ.
- ಮೋಟೇಶನ್ ಅವಧಿ ದಿನವನ್ನು ವಿಸ್ತರಣೆ ಮಾಡುವ ಬಗ್ಗೆ.
- ಫೋಟೋ ಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡುವಂತೆ ಸೂಕ್ತ ಆದೇಶ ನೀಡುವ ಬಗ್ಗೆ.
- ಗ್ರಾಮ ಆಡಳಿತ ಅಧಿಕಾರಿಗಳ ಜಾಬ್ ಚಾರ್ಟ್ ನಿಗದಿಪಡಿಸುವ ಬಗ್ಗೆ (ಕಡ್ಡಾಯವಾಗಿ ನಿರ್ವಹಿಸಬೇಕಾದ ದಾಖಲೆಗಳು).
- ದಫ್ತರ್ ಹಾಗೂ ಜಮಾಬಂದಿಯನ್ನು ರದ್ದು ಪಡಿಸುವ ಬಗ್ಗೆ.
- ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸುವ ವಿಚಾರದ ಸದರಿ ವೃಂದದ ನೌಕರರ ಬಹು ವರ್ಷದ ಬೇಡಿಕೆಯನ್ನು ಆದ್ಯತೆಯಾಗಿ ಪರಿಗಣಿಸಿ ಈಡೇರಿಸುವ ಬಗ್ಗೆ.
ಮೇಲ್ಕಂಡ ಈ ಎಲ್ಲಾ ಬೇಡಿಕೆಗಳನ್ನು ಈಡೇರುವವರೆಗೂ ದಿ. 10- 02- 25 ರಿಂದ ಎಲ್ಲಾ ಬಗೆಯ ಮೊಬೈಲ್ ಯಾಪ್ ಹಾಗೂ ವೆಬ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸಿ ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯ ವ್ಯಾಪಿ ಹಮ್ಮಿಕೊಳ್ಳಲಾಗುವುದು ಎಂಬ ಅಂಶವನ್ನು ತಮ್ಮ ಅವಗಾಹನೆಗೆ ತರ ಬಯಸುತ್ತಾ ಸಮೂಹದ ಬೇಡಿಕೆಗಳನ್ನು ಈಡೇರಿಸಿ ಉತ್ತಮ ಮತ್ತು ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕ ಮತ್ತು ಸಹಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನು ಮಾಡಿಕೊಡಬೇಕೆಂದು ಸಂಘವು ಆಗ್ರಹಿಸುತ್ತದೆ, ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಟ್ಟೂರು ತಾಲೂಕು, ತಾಲೂಕು ಕಛೇರಿಯ ಮುಂಭಾಗ ತಾಲೂಕಿನ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳು ಅನಿರ್ದಿಷ್ಟಾವಧಿ 2 ನೇ ಹಂತದ ಮುಷ್ಕರವನ್ನು ಮಾಡುತ್ತಿದ್ದಾರೆ.
ವರದಿಗಾರರು – ಎನ್ ಚಂದ್ರಗೌಡ
