ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ನಾಗೂರಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಬಾಗಲಕೋಟೆ ಜಿಲ್ಲೆಯ ಹುನಗುಂದ‌ ತಾಲೂಕಿನ ನಾಗೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ ಮಕ್ಕಳ ಕಲಿಕಾ ಹಬ್ಬ ನಡೆಯಿತು.
ಕ್ಲಸ್ಟರಿನ ಹನ್ನೆರಡು ಶಾಲೆಗಳಿಂದ ಆಗಮಿಸಿದ 100ಕ್ಕೂ ಹೆಚ್ಚು ಚಿಣ್ಣರು ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಬೆಳಿಗ್ಗೆ 10-30 ಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆವ್ವ ಮಾದರ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹುನಗುಂದ ಬಿ ಆರ್ ಸಿ ಯ ಪ್ರೌಢ ವಿಭಾಗದ ಸಂಪನ್ಮೂಲ ವ್ಯಕ್ತಿ ವಿನೋದಕುಮಾರ ಭೋವಿ ಮಾತನಾಡಿ ಎಫ್ ಎಲ್ ಎನ್ ಎಂದರೆ ಫಂಡಮೆಂಟಲ್ ಲಿಟರಸಿ ಅಂಡ್ ನ್ಯೂಮರಸಿ ಎಂಬುದು ಮಗುವಿನ ಕನಿಷ್ಠ ಕಲಿಕೆಯ ಮಾನದಂಡಗಳಾದ ಸ್ಪಷ್ಟ ಓದು, ಶುದ್ಧ ಬರಹ, ಸರಳ ಲೆಕ್ಕಾಚಾರ ಸಾಮರ್ಥ್ಯವಾಗಿದೆ. ಯಾವ ಮಕ್ಕಳು ಸಾಮಾನ್ಯ ಕಲಿಕೆಯಲ್ಲಿ ಈ ಸಾಮರ್ಥ್ಯಗಳನ್ನು ಸಾಧಿಸಿಲ್ಲವೋ ಅಂತಹ ಮಕ್ಕಳನ್ನು ಗುರುತಿಸಿ ಅವರಿಗೆ ಚಟುವಟಿಕೆಯಾಧಾರಿತ ವಿಶೇಷ ಬೋಧನೆಯ ಮೂಲಕ ಕಲಿಸುವ ಪ್ರಕ್ರಿಯೆಯಾಗಿದೆ. ವರ್ಷದ ಉದ್ದಕ್ಕೂ ನಡೆದ ಈ ಪ್ರಕ್ರಿಯೆ ಈಗ ಅಂತ್ಯಗೊಂಡಿದ್ದು ಆ ಮಕ್ಕಳು ಸಾಮಾನ್ಯ ಮಕ್ಕಳೊಂದಿಗೆ ಕಲಿಯುವಂತವರಾಗಿದ್ದು ಅಂಥವರಿಗೆ ವಿಶೇಷ ಸ್ಪರ್ಧೆಗಳನ್ನು ನಡೆಸಿ ಪ್ರೋತ್ಸಾಹಿಸುವ ಕಾರ್ಯಕ್ರಮವೇ ಎಫ್ಎಲ್ಎನ್ ಮಕ್ಕಳ ಕಲಿಕಾ ಹಬ್ಬವಾಗಿದೆ ಎಂದರು.

ಬಿ ಐ ಇ ಆರ್ ಟಿ ಸಂಗಮೇಶ್ ಹೊದ್ಲೂರ ಮಾತನಾಡಿ, ತಾವು ನಿಧಾನ ಗತಿಯ ಕಲಿಕೆಯ ಮಕ್ಕಳು ಎಂಬ ಕೀಳರಿಮೆಯಲ್ಲಿದ್ದ ಮಕ್ಕಳಲ್ಲಿ ವಿಶೇಷ ಚಟುವಟಿಕೆಗಳ ಮೂಲಕ ಎಲ್ಲ ಸಾಮರ್ಥ್ಯಗಳನ್ನು ಸಾಧಿಸುವಲ್ಲಿ ನಾವು ಸಹ ಮುಂದಿದ್ದೇವೆ ಎಂಬ ಭಾವನೆಯನ್ನು ಹುಟ್ಟು ಹಾಕಿ ಸ್ವಯಂ ಪ್ರೇರಣೆಯಿಂದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶ ಹಾಗೂ ಮಕ್ಕಳ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದ ಕೀರ್ತಿ ಎಲ್ಲಾ ಶಾಲೆಗಳ ಗುರುವೃಂದಕ್ಕೆ ಸಲ್ಲುತ್ತದೆ ಎಂದರು.

ಗಟ್ಟಿ ಓದು, ಕೈಬರಹ, ಮೆಮೊರಿ ಪರೀಕ್ಷೆ, ರಸಪ್ರಶ್ನೆಯಂತಹ ಏಳು ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಪಡೆದುಕೊಂಡರು. ಇಪ್ಪತ್ತಕ್ಕೂ ಹೆಚ್ಚು ಸಂಪನ್ಮೂಲ ಶಿಕ್ಷಕರು ಎಲ್ಲಾ ಸ್ಪರ್ಧೆಗಳನ್ನು ನಡೆಸಿಕೊಟ್ಟರು.

ಬಹುಮಾನ ವಿತರಣೆ ಹಾಗೂ ಸಮಾರೋಪ:

ಹುನಗುಂದ ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಎಸ್ ಗುಡಗುಂಟಿಯವರ ನೇತೃತ್ವದಲ್ಲಿ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ಹಂತದಲ್ಲಿ ಮಕ್ಕಳು ಅಮೋಘ ಸಾಧನೆ ಮಾಡಲು ಪ್ರಾಥಮಿಕ ಶಿಕ್ಷಣ ಅವರಿಗೆ ಭದ್ರ ಬುನಾದಿ ಆಗಬೇಕು. ಆ ನಿಟ್ಟಿನಲ್ಲಿ ಮಕ್ಕಳಲ್ಲಿ ಕಲಿಕಾ ಶಕ್ತಿ ಉಂಟು ಮಾಡುವಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪಾತ್ರ ದೊಡ್ಡದಾಗಿದೆ. ಕೋವಿಡ್ಡೋತ್ತರ ಕಾಲದಿಂದ ಮಕ್ಕಳ ಕಲಿಕೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹಿನ್ನಡೆಯಾಗಿದ್ದು ಸರಕಾರ ಎಲ್ಲಾ ಸೌಲಭ್ಯಗಳನ್ನು ನೀಡಿದರೂ ನಿಗದಿತ ಕಲಿಕಾ ಸಾಧನೆ ಮಾಡುವಲ್ಲಿ ವಿಫಲತೆ ಕಾಣುತ್ತಿದ್ದು, ಮಕ್ಕಳ ಹೆಸರು ಮಕ್ಕಳ ವಿಕಾಸಕ್ಕೆ ನಾವೆಲ್ಲರೂ ಕಂಕಣ ಬದ್ಧರಾಗಿ ದುಡಿಯಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ಸಂಗಮೇಶ ಸಿಂಗಾಡಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹಾಂತೇಶ ಮುರಡಿ, ಸದಸ್ಯ ಬಸ್ಸೆಟ್ಟೆಪ್ಪ ಸಿಂಗಾಡಿ, ಕಾರ್ಯದರ್ಶಿ ಆದನಗೌಡ ಹಿರೇಅಮರಗೌಡ್ರ, ಎಂ.ಬಿ. ಪರುತಗೌಡ್ರು, ಈರಪ್ಪ ಅಂಬಿಗೇರ, ಪರಶುರಾಮ ಹೂಲಗೇರಿ, ಬಸವರಾಜ ಮಾದರ, ಗುರಪ್ಪ ಹುಚನೂರ, ಅಯ್ಯನಗೌಡ ಗೌಡರ, ಶರಣಪ್ಪ ಗುರಿಕಾರ, ಸಿ ಆರ್ ಪಿ ಸಂಗಪ್ಪ ಸಂಗಮ, ಬಿ ಆರ್ ಪಿ ಜಿ ವೈ ಆಲೂರ , ಶಿಕ್ಷಕರಾದ ಸಿದ್ದು ಶೀಲವಂತರ, ಬಿ ಜಿ ಗೌಡರ, ಬಿ.ಎಚ್ ಭಜಂತ್ರಿ, ಅಶೋಕ ಬಳ್ಳಾ, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ