ಬೀದರ ನಗರದ ಲಾವಣ್ಯ ಕಲ್ಯಾಣ ಮಂಟಪದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ.) ಕಲಬುರಗಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2025 ನೇ ಸಾಲಿನ ದಿನಚರಿ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪರಿಸರ ಸಂರಕ್ಷಣೆಯಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪುರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಬುರಗಿ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ ಪಂವಾರ ಹಾಗೂ ಎ.ಬಿ. ಪಾಟೀಲ ಕಲ್ಯಾಣ ಕರ್ನಾಟಕ ಅರಣ್ಯ ನೌಕರರ ಸಂಘದ ಅಧ್ಯಕ್ಷರು ಹಾಗೂ ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ಅರಣ್ಯ ಅಧಿಕಾರಿಗಳು ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸಾಮಾಜಿಕ ಅರಣ್ಯ ವಿಭಾಗ ಇಲಾಖೆ ರಾಯಚೂರ ಸುರೇಶ ಬಾಬು, ಪ್ರವೀಣ ಕುಮಾರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅರಣ್ಯ ವಿಭಾಗ ಪ್ರಾದೇಶಿಕ ರಾಯಚೂರು, ವನಸಿರಿ ಫೌಂಡೇಷನ್ ಗೌರವ ಅಧ್ಯಕ್ಷ ಶಂಕರಗೌಡ ಎಲೆಕೊಡ್ಲಿಗಿ, ರಾಜು ಬಳಗಾನೂರು, ಚಂದ್ರು ಪವಾಡ ಶಟ್ಟಿ ಹಾಗೂ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಅರಣ್ಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
