
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕಲಿಕಾ ಹಬ್ಬದ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಲಿಕಾ ಹಬ್ಬದ ಕಾರ್ಯಕ್ರಮವನ್ನು ಬಿತ್ತಿ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮಾನ್ವಯಾಧಿಕಾರಿಗಳಾದ ಬಸಲಿಂಗಪ್ಪ ಅವರು ಮಾತನಾಡಿದರು. ಕರ್ನಾಟಕ ಸರಕಾರ ಆಯೋಜನೆ ಮಾಡಿರುವ ಕಲಿಕಾ ಹಬ್ಬ ಕಾರ್ಯಕ್ರಮವು ಇಲ್ಲಿ ಏರ್ಪಡಿಸುವ ಏಳು ವಿಧದ ಚಟುವಟಿಕೆಗಳು ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಲ್ಲಾ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ನಾವಿನ್ಯತೆ ಪೂರ್ಣ ಕಲಿಕೆಯನ್ನು ಅನುಭವಿಸಬೇಕೆಂದು ಸಲಹೆ ನೀಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳಾದ ಸೋಮಲಿಂಗಪ್ಪ ಅವರು ಭಾಗವಹಿಸಿ ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸ್ಪರ್ಧೆಗಳಲ್ಲಿ ಗೆಲ್ಲುವ ಆಸಕ್ತಿಯನ್ನು ಹೊಂದಿ ಭಾಗವಹಿಸಬೇಕು ಏಳು ಚಟುವಟಿಕೆಗಳಾದ ಗಟ್ಟಿ ಓದು, ಕಥೆ ಹೇಳುವುದು,ಕೈಬರಹ, ಜ್ಞಾಪಕ ಶಕ್ತಿ,ರಸಪ್ರಶ್ನೆ ಮತ್ತು ಪೋಷಕ ಹಾಗೂ ಮಕ್ಕಳ ಸಂಬಂಧ ಚಟುವಟಿಕೆಗಳಲ್ಲಿ ಮಕ್ಕಳಲ್ಲಿ ಸ್ಪಧಾ೯ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಡಾ.ಬಸವಲಿಂಗಯ್ಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗರಾಜ, ಎಸ್ ಡಿ ಎಮ್ ಸಿ ಉಪಾಧ್ಯಕ್ಷರಾದ ರಾಮಣ್ಣ, ಶಾಲಾ ಮುಖ್ಯ ಗುರುಗಳಾದ, ಸಮೂಹ ಸಂಪನ್ಮೂಲ ವ್ಯಕ್ತಿಯಾದ, ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಬಸವರಾಜ ಜವಳಿ ನಿರೂಪಿಸಿದರು.
