ಕಾರಟಗಿ:ಸಾಮಾನ್ಯ ಜನರು ಪವಿತ್ರ ದೇವಸ್ಥಾನಗಳ ಬಗ್ಗೆ ಪವಿತ್ರ ಭಾವನೆ ಹೊಂದಿರುತ್ತಾರೆ ಅಂತ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವ ಪರಿಕಲ್ಪನೆ ಅಳವಡಿಸಿಕೊಳ್ಳಬೇಕು ಎಂದು ಮಾನ್ಯ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಕೃಷ್ಣಮೂರ್ತಿ.ಟಿ. ಅವರು ಹೇಳಿದರು.
ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಶ್ರೀ ಬೆಟ್ಟದೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾದ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಚಿಲುಮೆ ಭಾಗ-2 ಸ್ವಚ್ಛತಾ ಶುಕ್ರವಾರ ಶ್ರಮಾದಾನದ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದರು.
ದೈನಂದಿನ ದಿನಗಳಲ್ಲಿ ಆರೋಗ್ಯದ ಕಾಳಜಿ ಪ್ರತಿಯೊಬ್ಬರಿಗೂ ಮುಖ್ಯ, ಅದಕ್ಕಾಗಿ ಅಭಿಯಾನದಡಿ ವಾರಕ್ಕೊಮ್ಮೆ ಐತಿಹಾಸಿಕ ದೇವಸ್ಥಾನ ಸ್ಥಳಗಳು, ಶಾಲಾ ಆವರಣ,ಸೇರಿ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತೆ ಶ್ರಮಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ನಂತರ ಮಾನ್ಯ ತಾ.ಪಂ ಇಒ ಮಹಾಂತಗೌಡ ಪಾಟೀಲ್ ಅವರು ಮಾತನಾಡಿ ಪ್ರತಿಯೊಬ್ಬರು ಸ್ವಚ್ಛತೆ ಅರಿವಿನ ಕಡೆ ಗಮನಿಸಿ ಎಲ್ಲೆಂದರಲ್ಲಿ ಕಸವನ್ನು ಹಾಕುವುದ ತಡೆಯಿರಿ,ಗ್ರಾಮ ಪಂಚಾಯತಿ ವತಿಯಿಂದ ಹಸಿ ಕಸ ಮತ್ತು ಒಣ ಕಸವನ್ನು ಸಂಗ್ರಹಿಸಲು ವಾಹನದ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬರು ಕಸವನ್ನು ವಿಂಗಡಿಸಿ ವಿಲೇವಾರಿ ಮಾಡಲು ಸಹಕರಿಸಿ ಎಂದರು.
ತದನಂತರ ಶ್ರಮಧಾನ ಕಾರ್ಯಕ್ರಮದಲ್ಲಿ ಸ್ವಚ್ಛತೆ ಕಾಪಾಡುವ ಕುರಿತು ಪ್ರತಿಜ್ಞಾವಿಧಿ ಭೋದಿಸಿ, ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಶ್ರಮಧಾನ ಸ್ವಚ್ಛತೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲಕ್ಷೀ ಯಮನೂರಪ್ಪ,ಉಪಾಧ್ಯಕ್ಷರಾದ ಜಿ.ವಿಷ್ಣುಮೂರ್ತಿ,ಸರ್ವ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳಾದ ರಾಮು ನಾಯಕ, ಕಾರ್ಯದರ್ಶಿ ಪ್ರಭುರಾಜ್, ತಾ.ಪಂ ಎಸ್ ಬಿ ಎಂ ವಿಷಯ ನಿರ್ವಾಹಕ ಭೀಮಣ್ಣ, ತಾಂತ್ರಿಕ ಸಂಯೋಜಕ ಬಸವರಾಜ್, ಐಇಸಿ ಸಂಯೋಜಕ ಸೋಮನಾಥ ನಾಯಕ, ಸೇರಿ ಅಂಗನವಾಡಿ, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ, ಗ್ರಾ.ಪಂ ಸಿಬ್ಬಂದಿಗಳು ಇದ್ದರು.