ಮೈಸೂರು : ಬೆಳಗಾವಿಯಲ್ಲಿ ಮರಾಠಿ ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಮಹದೇವ್ ಹಲ್ಲೆಗೊಳಗಾಗಿರುವ ಕನ್ನಡಿಗ ಬಸ್ ಕಂಡಕ್ಟರ್.
ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಚಲಿಸುತ್ತಿದ್ದ ಬಸ್ ನಿಲ್ಲಿಸಿದ ಮರಾಠಿ ಗೂಂಡಾಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ ಎಂದಿದ್ದಾರೆ.
ಬಸ್ ನಲ್ಲಿದ್ದ ಯುವತಿಯೊಬ್ಬರು ಮರಾಠಿಯಲ್ಲಿ ಟಿಕೆಟ್ ಕೇಳಿದ್ದಕ್ಕೆ ಕಂಡಕ್ಟರ್ ತನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಅದರಲ್ಲಿ ತಪ್ಪೇನಿದೆ ಕಂಡಕ್ಟರುಗಳೇನು ಎಲ್ಲಾ ಭಾಷೆಯನ್ನು ಕಲಿತಿರಬೇಕೆಂಬ ರೂಲ್ಸ್ ಇದೆಯೆ ಎಂದು ತೇಜಸ್ವಿ ಪ್ರಶ್ನಿಸಿದ್ದಾರೆ.
ಇಷ್ಟು ಸಣ್ಣ ವಿಷಯಕ್ಕೆ ಬಸ್ ನಲ್ಲಿದ್ದ ಮರಾಠಿ ಯುವಕರ ಗುಂಪು, ಕಂಡಕ್ಟರ್ ನನ್ನು ಹಿಡಿದು ಮರಾಠಿ ಮಾತನಾಡುವಂತೆ ಒತ್ತಾಯಿಸಿದ್ದಾರೆ ಅಲ್ಲದೆ ಬಸ್ ನಿಲ್ಲಿಸುವಂತೆ ಒತ್ತಾಯಿಸಿ, ಬಸ್ ನಿಲ್ಲಿಸಿ ಕಂಡಕ್ಟರ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು ನಾವು ಕೊಟ್ಟ ಭಿಕ್ಷೆಯಿಂದ ನೀವು ಕರ್ನಾಟಕ ನೆಲದಲ್ಲಿ ಬದುಕುತ್ತಿದ್ದೀರಿ ಕನ್ನಡ ನಾಡಿನಲ್ಲಿ ಬದುಕಲು ಇಷ್ಟ ಇಲ್ಲದಿದ್ದರೆ ಕರ್ನಾಟಕ ಬಿಟ್ಟು ತೊಲಗಿ ಎಂದು ಮರಾಠಿ ಪುಂಡರಿಗೆ ತೇಜಸ್ವಿ ನಾಗಲಿಂಗ ಸ್ವಾಮಿ ಎಚ್ಚರಿಸಿದ್ದಾರೆ.
ಕರ್ನಾಟಕ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿದ ಮರಾಠಿ ಗೂಂಡಾಗಳನ್ನು ಗಡಿಪಾರು ಮಾಡಿ ಗೂಂಡಾ ಕಾಯಿದೆ ಅಡಿ ಪ್ರಕರಣ ದಾಖಲಿಸಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.
- ಕರುನಾಡ ಕಂದ
