ಬೆಂಗಳೂರು : ಬಸವ ಇಂಟರ್‌ನ್ಯಾಷನಲ್ ಫೌಂಡೇಷನ್ ವತಿಯಿಂದ ಕೊಡಮಾಡುವ 2025ನೇ ಸಾಲಿನ ಡಾ.ಎಂ.ಎಂ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿಗೆ ದಲಿತ ಸಂಘರ್ಷ ಸಮಿತಿ ಸಂಚಾಲಕ ಮಾವಳ್ಳಿ ಶಂಕರ್ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹25 ಸಾವಿರ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಫೆ.24ರಂದು ಸಂಜೆ 5.30ಕ್ಕೆ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಹಿರಿಯ ಚಿಂತಕ ಡಾ|| ಕೆ. ಮರುಳಸಿದ್ದಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ, ಚಿತ್ರಕಲಾ ಪರಿಷತ್ತು ಅಧ್ಯಕ್ಷ ಡಾ. ಬಿ.ಎಲ್.ಶಂಕರ್ ಉಪಸ್ಥಿತರಿರುವರು ಎಂದು ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕರಾದ ರಮೇಶ್ ಮಂದಕ್ನಳ್ಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ರೋಹನ್ ವಾಘಮಾರೆ
