ಬೀದರ/ ಕಮಲನಗರ : ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಇಂದು ಕಮಲನಗರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಅನ್ನಭಾಗ್ಯ, ಗೃಹ ಲಕ್ಷ್ಮಿ, ಶಕ್ತಿ, ಯುವನಿಧಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪಿಸುವಂತೆ ಕಚೇರಿ ಕೆಲಸ ಮಾಡಲೆಂದು ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ವರದಿ:- ರೋಹನ್ ವಾಘಮಾರೆ
