ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮರ ಬೆಳೆಸಿ, ಪರಿಸರ ಉಳಿಸಿ: ಸಂಗಮೇಶ ಎನ್. ಜವಾದಿ

ಬೀದರ್ : ಮರವಿದ್ದರೆ ಬದುಕು, ಮರವಿದ್ದರೆ ಆಯುಷ್ಯ, ಆರೋಗ್ಯ, ಉಸಿರು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವ ಇಚ್ಛೆಯಿಂದ ಗಿಡ, ಮರಗಳನ್ನು ಬೆಳೆಸಿ, ಪರಿಸರ ಸಂರಕ್ಷಿಸಬೇಕು
ಎಂದು ಸಾಹಿತಿ, ಪರಿಸರ ಸಂರಕ್ಷಕ ವೇದಿಕೆ ರಾಜ್ಯ ಕಾರ್ಯದರ್ಶಿ ಸಂಗಮೇಶ ಎನ್ ಜವಾದಿ ಹೇಳಿದರು.

ತಾಲೂಕಿನ ಖೇಣಿ ರಂಜೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಪರಿಸರ ಸಂಗಮ ವೇದಿಕೆ ವತಿಯಿಂದ ಹಮ್ಮಿಕೊಂಡ ಎಸ್ ಎಸ್ ಎಲ್ ಸಿ ಮಕ್ಕಳ ಶೈಕ್ಷಣಿಕ ಕಾರ್ಯಾಗಾರ ಹಾಗೂ ಪರಿಸರ ಸಂರಕ್ಷಣೆ ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಸಂಗಮೇಶ ಎನ್ ಜವಾದಿ ರವರು ಪ್ರಕೃತಿ ನಮಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಶುದ್ಧ ನೀರು, ಗಾಳಿ, ಆಹಾರ ಸೇರಿದಂತೆ ಇನ್ನು ಅನೇಕ ಅಗತ್ಯ ವಸ್ತುಗಳನ್ನು ನೀಡುತ್ತಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ, ಪ್ರಕೃತಿಯಲ್ಲಿನ ಏರುಪೇರುಗಳಿಂದ ಭೂಮಿಯ ತಾಪಮಾನ ಹೆಚ್ಚಾಗಿದ್ದು, ಪ್ರಾಕೃತಿಕ ಅಸಮತೋಲನ ಏರ್ಪಟ್ಟಿದೆ ತಾಪಮಾನವನ್ನು ನಿಯಂತ್ರಿಸಿ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಮರಗಿಡಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾವಿಸಿ ಕಾಡನ್ನು ಉಳಿಸಿ, ಬೆಳೆಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು, ಅಭಿವೃದ್ಧಿ ಪರಿಸರಕ್ಕೆ ಪೂರಕವಾಗಿದ್ದರೆ ಒಳಿತು, ಇಲ್ಲದಿದ್ದರೆ ಶಾಪ ಅನ್ನುವ ಮಾತನ್ನು ಸರಿಯಾಗಿ ಅರ್ಥಮಾಡಿಕೊಂಡರೇ ಮಾತ್ರ ಮಾನವರ ಬದುಕು ಹಸನಾಗುತ್ತದೆ ಎಂದು ತಿಳಿಸಿದರು.

ಪರಿಸರ ಸಂಗಮ ವೇದಿಕೆ ಜಿಲ್ಲಾಧ್ಯಕ್ಷ ಕಾಶಿನಾಥ್ ಪಾಟೀಲ ಅವರು ಮಾತನಾಡಿ ಪರಿಸರ ಸಂಗಮ ವೇದಿಕೆ ಬೀದರ ಜಿಲ್ಲಾದ್ಯಂತ ಪರಿಸರ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿದೆ, ಸರ್ವರೂ ನಮ್ಮ ಜೊತೆ ಕೈ ಜೋಡಿಸುವ ಕೆಲಸ ಮಾಡಬೇಕು, ಸಮಾರಂಭಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಬೇಕು. ಅರಣ್ಯ ಸಂಪತ್ತು ಸಂರಕ್ಷಣೆ ಮಾಡುವಲ್ಲಿ ಎಲ್ಲರೂ ಪ್ರಯತ್ನ ಮಾಡಬೇಕು ಎಂದರು.

ಕಾರ್ಯಕ್ರಮದ ಕುರಿತು ಚಂದ್ರಶೇಖರ ತಂಗಾ, ರೇಣುಕಾ ಎನ್ ವಿ,ಬಸವರಾಜ್ ಪಾಟೀಲ್, ಆರ್ ಎಸ್ ಬಿರಾದಾರ್ ರವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ಎನ್ ಆರ್ ರವರು ವಹಿಸಿ, ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸರಸ್ವತಿ ಗುರುಲಿಂಗಪ್ಪ,
ಎಸ್ ಡಿ ಎಂ ಸಿ ಅಧ್ಯಕ್ಷರು ಶಶಿಧರ್ ಹಿಂದೋಡ್ಡಿ ಉಪಸ್ಥಿತರಿದ್ದರು.

ಮಧುಮತಿ ಸಹ ಶಿಕ್ಷಕರು ಪ್ರಾಸ್ತಾವಿಕವಾಗಿ ಮಾತನಾಡಿದರು.
ರೇಖಾ ಅತಿಥಿ ಶಿಕ್ಷಕರು ಸ್ವಾಗತಿಸಿದರು.
ಸತ್ಯನಾರಾಯಣ ಸಹ ಶಿಕ್ಷಕರು ನಿರೂಪಿಸಿದರು, ಶಿವರಾಮಕೃಷ್ಣ ಆಂಗ್ಲಭಾಷ ಶಿಕ್ಷಕರು ವಂದಿಸಿದರು.
ಇದೆ ಸಮಯದಲ್ಲಿ ಪರಿಸರ ಸಂರಕ್ಷಣೆ ಕುರಿತು ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಆಯೋಜಿಸಿ, ವಿಜೇತರಾದ ಮಕ್ಕಳಿಗೆ
ಬಹುಮಾನ ವಿತರಣೆ ಮಾಡಲಾಯಿತು.
ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಕವಿತಾ ಮಂಜುನಾಥ್ ಮುಖ್ಯ ಗುರುಗಳು ಸರ್ಕಾರಿ ಪ್ರೌಢಶಾಲೆ ನಿಂಬೂರ ಸೇರಿದಂತೆ ಗಣ್ಯರು, ಮಾತೆಯರು, ಶಿಕ್ಷಕರು,ವಿಧ್ಯಾರ್ಥಿಗಳು, ಮಕ್ಕಳು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ