ಮೈಸೂರು: ಮೈಸೂರಿನ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಅರಮನೆ ಉಪ ನಿರ್ದೇಶಕರನ್ನು ಕೂಡಲೇ ಬಂಧಿಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಹಿಂದಿನಿಂದಲೂ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ಸಾಲು ಸಾಲು ಅರೋಪಗಳು ಬಂದಿತ್ತು ಆದರೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ ಆಗಲೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ ಎಂದು ತೇಜಸ್ವಿ ಬೇಸರ ವ್ಯಕ್ತಪಡಿಸಿದ್ದಾರೆ.
ನಾಲ್ಕು ಸ್ತಂಭ ಗಳಲ್ಲಿ ಒಂದಾಗಿರುವ ಮಾಧ್ಯಮದ ಪತ್ರಕರ್ತರಿಗೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ ಎಂದು ಪ್ರಕಟಣೆಯಲ್ಲಿ ತೇಜಸ್ವಿ ತಿಳಿಸಿದ್ದಾರೆ.
ಈಗಾಗಲೇ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ದೇವರಾಜ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಗೊತ್ತಾಗಿದೆ,
ಪ್ರಕರಣ ದಾಖಲಾದರೆ ಸಾಲದು ಕೂಡಲೇ ಸುಬ್ರಹ್ಮಣ್ಯ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು ಇಲ್ಲವಾದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಎಚ್ಚರಿಸಿದ್ದಾರೆ.
- ಕರುನಾಡ ಕಂದ
