ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

ಬಳ್ಳಾರಿ/ಕಂಪ್ಲಿ: ಆರ್ಯವೈಶ್ಯ ಸಂಘ ಕಂಪ್ಲಿ, ಕಲ್ಯಾಣ ಮಂಟಪ ಅಭಿವೃದ್ದಿ ಸಮಿತಿ , ವಾಸವಿ ಯುವಜನ ಸಂಘ ಹಾಗೂ ಮಹಿಳಾ ಮಂಡಳಿ ವತಿಯಿಂದ ನಗರದ ಶ್ರೀ ನಗರೇಶ್ವರ ಮತ್ತು ಶ್ರೀ ಕನ್ಯಕಾ ಪರಮೇಶ್ವರಿ ನವಗ್ರಹಗಳ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಿತು.
ಬಾಲ ಆಲಯಗಳಲ್ಲಿ ದೇವರ ಪ್ರತಿಷ್ಠಾಪನೆಯು ವಾಸ್ತು ತಜ್ಞರು ಹಾಗೂ ಪುರೋಹಿತರಾದ ಪೂಜ್ಯ ಗುರುಗಳಾದ ಶ್ರೀ ರಮಣ ಬಾಬು ನೇತೃತ್ವದಲ್ಲಿ ನಡೆಯಿತು.
ಬಾಲ ಆಲಯ ದೇವರ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಶ್ರೀ ಗಣೇಶ, ಶ್ರೀಪಾರ್ವತಿ ದೇವಿ ಸಹಿತ ಶ್ರೀನಗರೇಶ್ವರ ಹಾಗೂ ಶ್ರೀ ಕನ್ಯಕಾ ಪರಮೇಶ್ವರಿ ಮತ್ತು ನವಗ್ರಹಗಳ ಮೂರ್ತಿಗಳನ್ನು ಶಾಸ್ತ್ರೋಕ್ತವಾಗಿ ಪೂಜಾ ವಿಧಿ ವಿಧಾನಗಳೊಂದಿಗೆ ಪ್ರತಿಷ್ಠಾಪಿಸಿ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು. ನಂತರ ಅನ್ನ ಸಂತರ್ಪಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ವಾಸವಿ ಯುವಜನ ಸಂಘದ ಅಧ್ಯಕ್ಷ ದರೋಜಿ ಮಂಜೇಶ್ ಮಾತನಾಡಿ ಧರ್ಮದ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯವಿದೆ’ ರಾಜ್ಯದಲ್ಲಿ ಸಮೃದ್ಧ ಮಳೆ ಬೆಳೆ ಆಗುವಂತೆ ಪ್ರಾರ್ಥಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಹಿರಿಯರು, ಯುವಜನ ಸಂಘದ ಪದಾಧಿಕಾರಿಗಳು ಹಾಗೂ ವಾಸವಿ ಮಹಿಳಾ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!