ಶಿವಮೊಗ್ಗ :ವಸತಿ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ೫ ಲಕ್ಷಕ್ಕೆ ಹೆಚ್ಚುವರಿ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಹಾಗೂ ವಸತಿ ಸಚಿವರಿಗೆ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವಿರೇಶ್ ಕ್ಯಾತನಕೊಪ್ಪ ಅವರು ಮನವಿ ಮಾಡಿದ್ದಾರೆ.
ಗ್ರಾಮ ಪಂಚಾಯಿತಿ ಮೂಲಕ ಅಂಬೇಡ್ಕರ್ ವಸತಿ ಯೋಜನೆ, ಬಸವ ವಸತಿ ಯೋಜನೆಗಳ ಅಡಿಯಲ್ಲಿ ಸರ್ಕಾರದಿಂದ ಮನೆಗಳ ನಿರ್ಮಾಣಕ್ಕೆ ಎಸ್ ಸಿ, ಎಸ್ ಟಿ ಫಲಾನುಭವಿಗೆ ೨ ಲಕ್ಷ, ಜನರಲ್‌ಗೆ ೧.೫೦ ಲಕ್ಷ ಸಹಾಯಧನ ನೀಡುತ್ತಿದ್ದು, ಇಂದಿನ ಈ ದುಬಾರಿ ದುನಿಯಾದಲ್ಲಿ ಮನೆ ನಿರ್ಮಾಣಕ್ಕೆ ಬೇಕಾಗುವ ಸಿಮೆಂಟ್, ಕಬ್ಬಿಣ, ಇಟ್ಟಿಗೆ ಮರಳು ಗಗನಕ್ಕೇರಿದ್ದು, ಬಡವರು ಮನೆ ನಿರ್ಮಿಸಿಕೊಳ್ಳಲು ಕಷ್ಟವಾಗುತ್ತಿದೆ ಇದನ್ನು ಅರಿತು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಸಹಾಯಧನವನ್ನು ೫ ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಒಂದು ಗ್ರಾಮ ಪಂಚಾಯಿತಿಗೆ ಪ್ರತಿ ವರ್ಷ ೫೦ ರಿಂದ ೭೫ ಮನೆ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ