
ಬೆಳಗಾವಿ: ದಿ. 05-03-2025 ರಂದು ರಾಯಬಾಗ ತಾಲೂಕಿನ ಕೆಂಪಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭಕ್ಕೆ ಸನ್ಮಾನ್ಯ ಶ್ರೀ ಸೀತಾರಾಮು ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ ರವರು ಆಗಮಿಸಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಎಂದು ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು ಮತ್ತು ಹುಕ್ಕೇರಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಪ್ರಭಾವತಿ ಪಾಟೀಲ್ ಅವರು ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಮುಖ್ಯ ಅತಿಥಿಗಳಾಗಿ ಶ್ರೀ ಮಹೇಶ್ ಬೆಲ್ಲದ್ ಅವರು ಆಗಮಿಸಿ ಶಿಕ್ಷಣ ರಂಗದಲ್ಲಿ ತಾಂತ್ರಿಕತೆಯ ಪ್ರಾಮುಖ್ಯತೆಯನ್ನು ಮತ್ತು ನಮ್ಮ ಮಕ್ಕಳು ಜಗತ್ತಿಗೆ ತೆರೆದುಕೊಳ್ಳಬೇಕೆಂದು ಉತ್ಸಾಹದಾಯಕ ನುಡಿಯನ್ನಾಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಗ್ರಾಮದ ಪ್ರಮುಖ ಗುರು ಹಿರಿಯರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
- ಕರುನಾಡ ಕಂದ