ಬಳ್ಳಾರಿ/ ಕಂಪ್ಲಿ:ಮಾ.06. ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ವೀರಶೈವ ಸಂಘದ ಸಹಯೋಗದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿಯ ಪೂರ್ವಭಾವಿ ಸಭೆ ಗುರುವಾರ ಜರುಗಿತು.
ನಂತರ ತಹಶೀಲ್ದಾರ್ ಶಿವರಾಜ ಶಿವಪುರ ಮಾತನಾಡಿ, ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಮಾ.12ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಮಾಜದವರು ಭಾಗವಹಿಸಿ, ಯಶಸ್ವಿಗೊಳಿಸಬೇಕು. ರೇಣುಕಾಚಾರ್ಯರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಆದರ್ಶಗಳ ಪರಿಪಾಲನೆಯೊಂದಿಗೆ ಒಳ್ಳೆಯ ಬದುಕಿಗೆ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಶಿರಸ್ತೇದಾರ ರಮೇಶ, ಪ್ರಥಮ ದರ್ಜೆ ಸಹಾಯಕ ಮಾಲತೇಶ ದೇಶಪಾಂಡೆ, ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ಪಿ.ಮೂಕಯ್ಯಸ್ವಾಮಿ, ಮುಖಂಡರಾದ ಕೆ.ಎಂ.ಹೇಮಯ್ಯಸ್ವಾಮಿ, ಎಸ್.ಎಂ.ನಾಗರಾಜ(ಪುರಸಭೆ ಸದಸ್ಯ), ವಾಗೀಶ್, ಟಿಎಚ್ಎಂ ರಾಜಕುಮಾರ, ಎಸ್.ಡಿ.ಬಸವರಾಜ, ಜಿ.ಚಂದ್ರಶೇಖರಗೌಡ, ವೆಂಕಾರೆಡ್ಡಿ ಸೇರಿದಂತೆ ಸಮಾಜದವರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ.