ಯಾದಗಿರಿ: ಜನಪ್ರಿಯ ನಾಯಕರು, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಶ್ರೀ ಕೆ.ಎಚ್. ಮುನಿಯಪ್ಪ ಅವರ ಜನ್ಮದಿನದ ಪ್ರಯುಕ್ತ ಅವರ ಅಧಿಕೃತ ಸರ್ಕಾರಿ ನಿವಾಸದಲ್ಲಿ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ ಸಿ ಘಟಕ ಸಂಘಟನಾ ಕಾರ್ಯದರ್ಶಿ ಹಾಗೂ ಕುರಕುಂದ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಮಲ್ಲು ಹಲಗಿ ಅವರಿಂದ ಹೂಗೂಚ್ಚ ನೀಡಿ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎಚ್ ಆಂಜನೇಯ, ಮಾಜಿ ಲೋಕಸಭಾ ಸದಸ್ಯರಾದ ಬಿ ಎನ್ ಚಂದ್ರಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
- ಕರುನಾಡ ಕಂದ