ಚಾಮರಾಜನಗರ : ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ. ಶಿಕ್ಷಣ, ಆರೋಗ್ಯ, ಸಾರಿಗೆ ಹಾಗೂ ಅನೇಕ ಕಲ್ಯಾಣಗಳಿಗೆ ಹೆಚ್ಚು ಒತ್ತು ಕೊಡುವ ಮೂಲಕ ಉತ್ತಮ ಬಜೆಟ್ ಕೊಟ್ಟಿದ್ದಾರೆ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಕ್ಷೇತ್ರದ ಅಭಿವೃದ್ಧಿಯ ನಿಟ್ಟಿನ ಬಜೆಟ್ ಇದಾಗಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿಯ ಉತ್ತಮ ಆಲೋಚನೆ ಸಹ ಇದಾಗಿದೆ. ಹಲವು ಸಂಘಟನೆಗಳ ಹೋರಾಟಕ್ಕೂ ಬೆಲೆ ಕೊಟ್ಟು ಅನುದಾನ ನೀಡುವ ಮೂಲಕ ಎಲ್ಲರಿಗೂ ನೆರವು ಸಿಕ್ಕಿದಂತಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ನೀರಾವರಿ ಅಭಿವೃದ್ಧಿಗಾಗಿ ಈಗಾಗಲೇ ಡಿಕೆ ಶಿವಕುಮಾರ್ ಎಲ್ಲಾ ಶಾಸಕರ ಜೊತೆ ಸಭೆ ನಡೆಸಿದ್ದಾರೆ. ನಾವು 500 ಕೋಟಿಯಷ್ಟು ಅನುದಾನ ಕೇಳಿದ್ದೇವೆ ಈಗಾಗಲೇ ಡಿ.ಪಿ.ಆರ್ ಸಹ ಆಗಿದೆ ಇನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆಯಷ್ಟೇ ಬಾಕಿ ಇದೆ. ಮುಂದಿನ ದಿನಗಳಲ್ಲಿ ಮಲೈಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ವಿಶೇಷ ಅನುದಾನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿ ಯಾಗಲಿ ಎಂಬ ಭರವಸೆ ನಮಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.
ವರದಿ ಉಸ್ಮಾನ್ ಖಾನ್