ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಗ್ಯಾರೆಂಟಿ ಅನುಷ್ಠಾನ ಸಮಿತಿಯಲ್ಲಿ ಉಚಿತವಾಗಿ ಕೆ ಆರ್ ಎಸ್ ಕಾರ್ಯಕರ್ತರು ಕೆಲಸ ಮಾಡಲು ಸಿದ್ದ : ರಾಜ್ಯದಲ್ಲಿ ದುರಾಡಾಳಿತ ಇದೆಯೆಂದು ಒಪ್ಪಿಕೊಂಡ ಸರ್ಕಾರ

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಕಾರಣ ನೀಡಿ “ಗ್ಯಾರಂಟಿ ಅನುಷ್ಠಾನ ಸಮಿತಿ”ಗಳನ್ನು ರಚಿಸಿದೆ. ಇದು ಸರ್ಕಾರದ ನಿಯಂತ್ರಣದಲ್ಲಿ ಆಡಳಿತ ಇಲ್ಲದಿರುವುದು ಮತ್ತು ಅದನ್ನು ತನ್ನಿಂದ ನಿಯಂತ್ರಿಸಲು ಸಾಧ್ಯವಿಲ್ಲವೆಂದು ಸರ್ಕಾರವೇ ನೇರವಾಗಿ ಹೇಳುತ್ತಿದೆ. ಗ್ಯಾರಂಟಿಗಳನ್ನು ಜಾರಿ ಮಾಡಬೇಕಾದ ಆಡಳಿತ ವ್ಯವಸ್ಥೆಯು ಕುಸಿದಿದೆ, ಅಧಕ್ಷವಾಗಿದೆ ಮತ್ತು ದುರಾಡಳಿತ ವ್ಯಾಪಕವಾಗಿದೆ ಎಂದು ನೇರವಾಗಿಯೆ ಹೇಳಿದಂತಾಯಿತು. ಈ ಸಮಿತಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡಲಾಗಿದ್ದು. ಸಮಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳಿಗೆ ಮಾಸಿಕ ವೇತನ ಮತ್ತು ಸದಸ್ಯರುಗಳಿಗೆ ಸಭಾ ಭತ್ಯೆ ನೀಡಲಾಗುತ್ತಿದ್ದು, ಇದರಿಂದ ಪ್ರತಿ ತಿಂಗಳು ಅಂದಾಜು 2 ಕೋಟಿ ಸರ್ಕಾರಕ್ಕೆ ಹೊರೆಯಾಗುತ್ತಿದೆ, ಸರ್ಕಾರದಲ್ಲಿ ಹಣವಿಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿಲ್ಲ, ಆದರೆ, ವಾರ್ಷಿಕವಾಗಿ 30 ಕೋಟಿ ಹಣವನ್ನು ಸರ್ಕಾರ ವೆಚ್ಚ ಮಾಡುತ್ತಿದೆ. ಶಕ್ತಿ ಯೋಜನೆಯ ಭಾಗವಾಗಿ ಸಾರಿಗೆ ನಿಗಮಗಳಿಗೆ 900 ಕೋಟಿಗೂ ಅಧಿಕ ಹಣ ಪಾವತಿಸಬೇಕಿದೆ, ಇನ್ನೂ ಎರಡು ತಿಂಗಳ ಗೃಹಲಕ್ಷ್ಮಿ ಹಣ ತಲುಪಿಲ್ಲ, ಆದರೂ ಕಾಂಗ್ರೆಸ್ ಕಾರ್ಯಕರ್ತರ ಓಲೈಕೆಗೆ ಹಣ ವೆಚ್ಚ ಮಾಡಲಾಗುತ್ತಿದೆ. ಇನ್ನು ರಾಜ್ಯದ ಹಲವಾರು ಕೆರೆ ಅಭಿವೃದ್ಧಿಗಾಗಿ ಒಂದೆರಡು ಕೋಟಿಯ ಯೋಜನೆಗಳಿಗೆ ಹಣ ಇಲ್ಲವೆಂದು ಸರ್ಕಾರ ಪ್ರಸ್ತಾವನೆಗಳನ್ನು ತಿರಸ್ಕರಿಸಿದೆ, ವಿದ್ಯಾರ್ಥಿ ವೇತನ ನೀಡಲು ಹಣವಿಲ್ಲ, ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲು ಹಣ ಇದೆ. ಇದು ಸಿದ್ದರಾಮಯ್ಯನವರ “ದುರಾಡಾಳಿತ ಗ್ಯಾರೆಂಟಿ” ಯೋಜನೆಯಾಗಿದೆ.
ಸರ್ಕಾರದ ಆಡಳಿತ ಯಂತ್ರ ಸುಸ್ಥಿಯಲ್ಲಿದ್ದರೆ ಮತ್ತು ಶಾಸಕರು ತಮ್ಮ ಕರ್ತವ್ಯವನ್ನು ಸೂಕ್ತವಾಗಿ ನಿಭಾಯಿಸಿದರೆ ಈ ಸಮಿತಿಗಳ ಅಗತ್ಯವೇ ಇರುವುದಿಲ್ಲ. ಮುಖ್ಯಮಂತ್ರಿಯವರು ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆಯು, ಸರ್ಕಾರಕ್ಕೆ ತನ್ನ ಆಡಳಿತವನ್ನು ಸುಸ್ಥಿಗೆ ತರುವ ಯಾವ ಆಸಕ್ತಿಯೂ ಇಲ್ಲ ಎಂದು ತೋರಿಸುತ್ತದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಮುಂದುವರೆಸುವುದಾಗಿ ಮತ್ತು ಮುಂದೆಯೂ ಅದು ಇರತ್ತದೆಯೆಂದು ಅವರು ಹೇಳಿದ್ದಾರೆ. ಇಷ್ಟು ನಿರ್ಲಜ್ಜೆಯಿಂದ ದುರಾಡಳಿತವನ್ನು ಸಮರ್ಥಿಸಿಕೊಂಡಿರುವುದು ಸಮಂಜಸವಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಬಡವರಿಗೆ ನೀಡಬೇಕಾದ ಅನ್ನಭಾಗ್ಯದ ಅಕ್ಕಿಯನ್ನು ವಿತರಿಸದೆ, ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ನಿರಂತರವಾಗಿ ಈ ಅಕ್ರಮ, ಅನ್ಯಾಯಗಳನ್ನು ಬಯಲಿಗೆ ಎಳೆಯುತ್ತಿದ್ದರೂ ಕೂಡ ಸರ್ಕಾರ ಮೌನವಾಗಿದೆ. ಇನ್ನು ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರದ ಪ್ರಕರಣಗಳ ವಿಚಾರಣೆಗೆ ಲೋಕಾಯುಕ್ತ ಪೊಲೀಸರು ಅನುಮತಿ ಕೇಳಿದರು ಕೂಡ, ಅನುಮತಿ ನೀಡದೆ ಸಾವಿರಾರು ಪ್ರಕರಣಗಳ ಕಡತಗಳು ದೂಳು ಹಿಡಿಯುತ್ತಿವೆ. ಇವೆಲ್ಲವನ್ನು ಸರಿಪಡಿಸಬೇಕಾದ ಸರ್ಕಾರವು ಅಕ್ರಮಗಳಲ್ಲಿ ಈಜಾಡುತ್ತಿದೆ.
ಕೆ ಆರ್ ಎಸ್ ಪಕ್ಷದ ಸದಸ್ಯರು ಯಾವುದೇ ಭತ್ಯೆ, ಗೌರವಧನ ಪಡೆಯದೆ ಅನುಷ್ಠಾನ ಸಮಿತಿಯಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಸಿದ್ದರಿದ್ದೇವೆ, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತನ್ನ ಪಂಚ ಗ್ಯಾರೆಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನ ಮಾಡಬೇಕೆಂಬ ಉದ್ದೇಶ ಇದ್ದರೆ ನಮ್ಮನ್ನು ನೇಮಕ ಮಾಡಿಕೊಂಡು ಸಾರ್ವಜನಿಕ ಹಣವನ್ನು ಉಳಿಸಲಿ ಇಲ್ಲಾ ತಕ್ಷಣವೇ ಈ ಗ್ಯಾರೆಂಟಿ ಅನುಷ್ಠಾನ ಸಮಿತಿಗಳನ್ನು ರದ್ದುಪಡಿಸಲಿ ಎಂದು ಕೆ ಆರ್ ಎಸ್ ಪಕ್ಷದ ಮುಖಂಡ ಸಿದ್ದು ಕಣಬುರಗಿ ಆಗ್ರಹಿಸಿದರು.

ವರದಿ ಭೀಮಸೇನ ಕಂಬಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ