ಶಿವಮೊಗ್ಗ : ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಸಂಘದ ೫ನೇ ವರ್ಷಾಚರಣೆಯ ಸವಿ ನೆನಪಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮತ್ತು ಪ್ರಶಸ್ತ್ತಿ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರದ ಪೊಲೀಸ್ ಇಲಾಖೆಯಲ್ಲಿ ಸೇವೆ ಮಾಡುತ್ತಾ ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿರುವ ತಿಮ್ಮೇಶಪ್ಪ ಗುಡ್ಡೇಹಳ್ಳಿ ಅವರ ಸಾಧನೆ ಗುರುತಿಸಿ ರಾಷ್ಟ್ರಮಟ್ಟದ ಸಾಹಿತ್ಯ ಸೌರಭ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಜಿಲ್ಲಾಧ್ಯಕ್ಷರಾದ ರಾಮು ಎನ್. ರಾಥೋಡ್, ಡಾ. ಹಸೀನಾ, ಸಂಸ್ಥಾಪಕ ಅಧ್ಯಕ್ಷ ಮಧು ನಾಯ್ಕ್ ಲಂಬಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ