
ಮಲೆ ಮಾದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಕುರಿತು ಶಾಸಕ ಎಂ.ಆರ್ ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧ್ಯಕ್ಷತೆಯಲ್ಲಿ ಸಭೆ
ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಒತ್ತುವರಿ ಕುರಿತು ಮಲೆ ಮಾದೇಶ್ವರ ನಾಗಮಲೆ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಮಲೆ ಮಹದೇಶ್ವರ ಬೆಟ್ಟ ಮಾಸ್ಟರ್ ಪ್ಲಾನ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿಗಳನ್ನು ನಡೆಸುವ ಸಂಬಂಧ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಅಂತೇಯೇ ಸರ್ವೇ ಕಾರ್ಯ ನಡೆಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಾದರಿ ಧಾರ್ಮಿಕ ಕ್ಷೇತ್ರವನ್ನಾಗಿಸಲು ಕ್ರಮ ವಹಿಸಲಾಗುವುದು. ಹನೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಕೆ ಶಿಫ್ ರಸ್ತೆ ಕಾಮಗಾರಿ ಕೈಗೊಳ್ಳುವುದು ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಮಾದೇಶ್ವರ ಬೆಟ್ಟದ ಮಾಸ್ಟರ್ ಪ್ಲಾನ್ ಆವರಣದ ಅರಣ್ಯದಂಚಿನಲ್ಲಿ ಬರುವ ವಿವಿಧ ಭಾಗಗಳಲ್ಲಿ ಇರುವ ಜಮೀನನ್ನು ತುರ್ತಾಗಿ ಸರ್ವೇ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದರು.
ಇದಲ್ಲದೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬೇಟಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೌಚಾಲಯ ನಿರ್ಮಿಸುವಂತೆ ಕೆ ಎಸ್ ಆರ್ ಟಿ ಸಿ ಡಿ.ಸಿ ಅವರಿಗೆ ತಿಳಿಸಿದರು ಹಾಗೂ ಡಾರ್ಮೆಟ್ರಿ ಹತ್ತಿರ ನೂತನವಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 95 ಲಕ್ಷ ರೂ.ನಲ್ಲಿ ನಿರ್ಮಿಸಲಾಗುತ್ತಿರುವ ಶೌಚಾಲಯ ಹಾಗೂ ಸ್ಥಾನದ ಗೃಹ ಕಾಮಗಾರಿಯನ್ನು ವೀಕ್ಷಣೆ ಮಾಡಿ ತುರ್ತಾಗಿ ಕೆಲಸವನ್ನು ಮುಗಿಸುವಂತೆ ಸಂಬಂಧ ಪಟ್ಟ ಇಂಜಿನಿಯರ್ ಗಳಿಗೆ ಸೂಚನೆಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಕೊಳ್ಳೇಗಾಲ ಉಪವಿಭಾಗ ಅಧಿಕಾರಿ ಮಹೇಶ್, ತಹಸೀಲ್ದಾರ್ ಗುರುಪ್ರಸಾದ್, ವಲಯ ಅರಣ್ಯಾಧಿಕಾರಿ ಅಮಿತ್, ಮಲೈ ಮಹದೇಶ್ವರ ಬೆಟ್ಟದ ಪೊಲೀಸ್ ಇನ್ಸ್ ಪೆಕ್ಟರ್ ಜಗದೀಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಿರಣ್ ಕುಮಾರ್, ಆರ್.ಐ. ಶಿವಕುಮಾರ್, ಲೋಕೋಪಯೋಗಿ ಇಲಾಖೆಯ ಎ.ಇ ಮಹದೇವ್ ಸ್ವಾಮಿ, ಮಹೇಶ್, ಎಡಿ, ಎಲ್,ಆರ್ ನಟರಾಜು ಸೇರಿದಂತೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್.
