ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸೋಮವಾರ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು. ಸಿಂದಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಅಶೋಕ್ ಮನಗೂಳಿ ರಂಜಾನ್ ಹಬ್ಬದ ಪ್ರಯುಕ್ತ ಆಲಮೇಲದ ಈದ್ಗಾ ಮೈದಾನದಲ್ಲಿ ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ತಿಳಿಸುವಾದರೊಂದಿಗೆ ಈದ್ಗಾ ಮೈದಾನ ಅಭಿವೃದ್ಧಿ ಕಾರ್ಯ ಮತ್ತು ಖಬರ್ ಸ್ಥಾನ ಅಭಿವೃದ್ಧಿ ಇನ್ನೂ ಹತ್ತು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು. ಮುಂಬರುವ ರಂಜಾನ್ ಹಬ್ಬದ ಒಳಗಾಗಿ ಅಭಿವೃದ್ಧಿ ಮಾಡುತ್ತೇನೆ ಎಂದು ಮಾತು ನೀಡಿದರು. ನಿಮಗೆ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ತ್ಯಾಗ ,ಶಾಂತಿ ಮತ್ತು ಸೌಹಾರ್ದತೆಯ ಸಂಕೇತ ಸಾರುವ ಮೂಲಕ ಪವಿತ್ರ ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.
ವರದಿ.ಹಣಮಂತ ಚ. ಕಟಬರ್
