ಕಲಬುರಗಿ: ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೇದೆ ಪ್ರಶಾಂತ ದೇಶಟ್ಟಿ ಅವರು 2023 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೇದೆ ಪ್ರಶಾಂತ ದೇಶಟ್ಟಿ ಅವರು ಬಿ.ಎಡ್. ಪದವೀಧರರಾಗಿದ್ದು ಮೂಲತಃ ಆಳಂದ ತಾಲೂಕಿನ ಕವಲಗಾ ಗ್ರಾಮದವರಾಗಿದ್ದಾರೆ. ಜಿಲ್ಲೆಯ ಆಳಂದ,ರೇವೂರು ಸೇರಿದಂತೆ ಇನ್ನಿತರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ತನಿಖಾ ಸಹಾಯಕರಾಗಿ ಮತ್ತು ಬರಹದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿದ ರಾಜ್ಯ ಸರ್ಕಾರ ಇವರ ಸೇವೆ ಗುರುತಿಸಿ ಪ್ರಶಾಂತ ಅವರಿಗೆ ಸಿ.ಎಂ ಪದಕ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪೇದೆ ಪ್ರಶಾಂತ ಸರ್ಕಾರದ ಮುಖ್ಯಮಂತ್ರಿಗಳ ಪದಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚು ಮಾಡಿದೆ ಮುಂದಿನ ದಿನಗಳಲ್ಲಿ ಉತ್ತಮ ಸೇವೆ ಸಲ್ಲಿಸಲು ಪ್ರಯತ್ನಿಸುತ್ತೇನೆ ಎಂದರು.
ವರದಿ: ಚಂದ್ರಶೇಖರ ಪಾಟೀಲ್, ಜೇವರ್ಗಿ
