ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಿಕಾ ಪ್ರಕಟಣೆ

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡಬೇಕು – ಶ್ರೀ ಮೋಹನ್ ಗೌಡ

ಮಂಗಳೂರು : ಕರ್ನಾಟಕ ಸರಕಾರವು ಇತ್ತಿಚೇಗೆ ತನ್ನ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ ಹೆಣ್ಣುಮಕ್ಕಳ ಮದುವೆಗೆ 50 ಸಾವಿರ ರೂಪಾಯಿ, ಮುಸಲ್ಮಾನ ವಿದ್ಯಾರ್ಥಿಗಳ ವಿದೇಶೀ ಶಿಷ್ಯ ವೇತನಕ್ಕೆ 30 ಲಕ್ಷ ರೂ., ಮುಸಲ್ಮಾನ ಹೆಣ್ಣುಮಕ್ಕಳಿಗೆ ಆತ್ಮ ರಕ್ಷಣೆ ತರಬೇತಿ, ವಕ್ಸ್ ಬೋರ್ಡ ಆಸ್ತಿ ರಕ್ಷಣೆಗೆ 150 ಕೋಟಿ ರೂ. ಅನುದಾನ, ಮುಸಲ್ಮಾನರು ಬಹುಸಂಖ್ಯಾತರಿರುವ ಪ್ರದೇಶದಲ್ಲಿ ಐಟಿಐ ಕಾಲೇಜಿಗೆ ಮಂಜೂರಾತಿ, 100 ಉರ್ದುಶಾಲೆಗಳ ಸ್ಥಾಪನೆ, ಮುಸಲ್ಮಾನ ಯುವಕರ ಸ್ಟಾರ್ಟ ಆಪಗೆ ಸರಕಾರೀ ಸಹಾಯದನ, ಮುಸಲ್ಮಾನ ಮಕ್ಕಳಿಗೆ ವೃತ್ತಿ ಪರ ತರಬೇತಿ, ಹಜ್ ಭವನಕ್ಕೆ ಅನುದಾನ. ಹೀಗೆ ಸರಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನೆಪದಲ್ಲಿ 4500 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ, ಸರಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ ಎಂದು ಹಿಂದೂ ಜನಜಾಗೃತಿ ರಾಜ್ಯ ವಕ್ತಾರರಾದ ಶ್ರೀ ಮೋಹನ್ ಗೌಡ ಇವರು ಹೇಳಿದರು.
ಈ ವಿರುದ್ಧ ಸಮಸ್ತ ಹಿಂದೂಪರ ಸಂಘಟನೆಗಳು ಇಂದು ಮಂಗಳೂರಿನ ಮಿನಿ ವಿಧಾನಸೌದದ ಎದುರು ಪ್ರತಿಭಟಿಸಿ ಜಿಲ್ಲಾಧಿಕಾರಿಗಳಾದ ಮುಳ್ಳೈ ಮುಹಿಲನ್ ಇವರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ತಲುಪಿಸಲಾಯಿತು. ಈ ಆಂದೋಲನದಲ್ಲಿ ಹಿಂದೂ ಯುವ ಸೇನೆ ಮುಖಂಡರಾದ ಜನಾರ್ಧನ ಅರ್ಕುಳ, ರೈತ ಸಂಘದ ರಾಜ್ಯ ಪ್ರಮುಖರಾದ ಗಿರೀಶ್ ಕೊಟ್ಟಾರಿ, ಲೊಕೇಶ್ ಕುತ್ತಾರ್, ದಿನಕರ ಬಜಾಲ್, ಧರ್ಮೇಂದ್ರ ಉಳ್ಳಾಲ, ಸತೀಶ್ , ವಸಂತ್ ರೈ ಮುಂತಾದ ಹಿಂದುತ್ವ ನಿಷ್ಠರು ಉಪಸ್ಥಿತರಿದ್ದರು.
ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ೩೪ ಸಾವಿರ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರಿಗೆ ಯಾವುದೇ ಸಂಬಳ ಇಲ್ಲ. ಆದರೆ ಇಮಾಮ್‌ರಿಗೆ ೬ ಸಾವಿರ ರೂಪಾಯಿ ಅನುದಾನ ನೀಡಲಾಗಿದೆ. ಅದಲ್ಲದೆ ಧಾರ್ಮಿಕ ದತ್ತಿ ಇಲಾಖೆಯ ಸಿ ಗ್ರೇಡ್ ನ ಸಾವಿರಾರು ದೇವಸ್ಥಾನಗಳು ಜೀರ್ಣೋದ್ದಾರ, ಸುಣ್ಣ ಬಣ್ಣ ಇಲ್ಲದೆ ಶಿಥಿಲಾವಸ್ಥೆಗೆ ತಲುಪಿವೆ. ಆದರೆ ಪ್ರಾಚೀನ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಯಾವುದೇ ಅನುದಾನವಿಲ್ಲ. ಹೀಗೆ ಸರಕಾರವು ಸಾರ್ವಜನಿಕರ ತೆರಿಗೆ ಹಣವನ್ನು ಕೇವಲ ಒಂದೇ ಸಮುದಾಯದ ಅಭಿವೃದ್ಧಿಗೆ ವಿನಿಯೋಗಿಸುವುದು ಭಾರತದ ಸಂವಿಧಾನದ ಕಲಂ ೧೪, ೧೫ ರ ಉಲ್ಲಂಘನೆಯಾಗಿದೆ. ಹಾಗಾಗಿ ಸರಕಾರದ ಈ ವರ್ಷದ ಹಣಕಾಸು ವಿಧೇಯಕಕ್ಕೆ ಅನುಮೋದನೆ ನೀಡಬಾರದು ಎಂದು ಆಗ್ರಹಿಸುತ್ತಿದ್ದೇವೆ ಎಂದು ಆಂದೋಲನ ನಡೆಸಿ ಮನವಿಯನ್ನು ನೀಡಲಾಯಿತು
ಎಂದು ಶ್ರೀ ವಿಜಯ್ ಕುಮಾರ
ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕರು
ದಕ್ಷಿಣ ಕನ್ನಡ ಜಿಲ್ಲೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಚಂದ್ರಶೇಖರ ಹೆಬ್ಬಾರ್ ಕೊಲ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!